ಹಾಸನ: ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು, ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ದುರುಪಯೋಗ, ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಜಾರಿ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ನವಿಲೇ ಅಣ್ಣಪ್ಪ, ‘ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಶೇ 4ರಷ್ಟು ಮೀಸಲಾತಿ ನೀಡುವ ಮೂಲಕ ಮುಸ್ಲಿಂ ಸಮುದಾಯದ ತುಷ್ಟೀಕರಣಕ್ಕೆ ಮುಂದಾಗಿದೆ’ ಎಂದು ಆರೋಪಿಸಿದರು.

‘ದಲಿತರ ಉದ್ಧಾರರಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಉದ್ಯೋಗ, ವಾಹನ ಖರೀದಿ, ಶಿಕ್ಷಣಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ದಲಿತ ಪರ ಎಂದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಏರಿದ ಏಣಿಯನ್ನು ಒದಯುವ ಕೆಲಸ ಮಾಡಿದೆ’ ಎಂದು ಟೀಕಿಸಿದರು.

‘ಈ ಬಾರಿಯ ಬಜೆಟ್ನಲ್ಲಿಯೂ ಮುಸ್ಲಿಮರಿಗೆ ಮಾತ್ರ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಅದರಲ್ಲೂ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿಯಂತಹ ಕರಾಳ ಮಸೂದೆ ಮಂಡನೆ ಮಾಡುವ ಮೂಲಕ ಮುಸ್ಲಿಮರ ತುಷ್ಟೀಕರಣಕ್ಕೆ ಮುಂದಾಗಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

‘ಬಜೆಟ್ ವಿರುದ್ಧ ಮಾತನಾಡಿದ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯವಾಗಿದೆ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿರುವುದು ಇದಕ್ಕೆ ಸಾಕ್ಷಿ. ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಸರ್ಕಾರ ಹಲವಾರು ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ’ ಎಂದು ಆರೋಪಿಸಿದರು.

ಕೂಡಲೇ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ನಡೆ ಕೈಬಿಡಬೇಕು. ಇಲ್ಲವಾದರೆ ಬಿಜೆಪಿಯಿಂದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರ ಈಗಲಾದರೂ ಬುದ್ದಿ ಕಲಿಯಬೇಕು. ಸಂವಿಧಾನ ಬಡಾವಣೆ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಪ್ರಸನ್ನ ಕುಮಾರ್, ಹರ್ಷಿತ್, ಪ್ರತಾಪ್, ಶೇಷಮ್ಮ, ವೇದಾವತಿ, ನಾರಾಯಣಗೌಡ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

‘ಅಂಬೇಡ್ಕರ್ ಸಂವಿಧಾನಕ್ಕೆ ಶಿವಕುಮಾರ್ ಅಗೌರವ’

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಕೊಡುವ ಬಗ್ಗೆ ಮಾತನಾಡುವ ಮೂಲಕ ಅಂಬೇಡ್ಕರ್ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ ಎಂದು ಶಾಸಕ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಸಿಮೆಂಟ್ ಮಂಜು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಶಾಸಕರಿಗೆ ಸಮರ್ಪಕವಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ 89 ಬಾರಿ ಸಂವಿಧಾನ ತಿದ್ದುಪಡಿ ಮಾಡಿದ್ದು ದಲಿತ ವಿರೋಧಿಯಂತೆ ಈಗಲೂ ನಡೆದುಕೊಳ್ಳುತ್ತಿದೆ. ಇದರ ವಿರುದ್ಧ ಮಾತನಾಡಿದ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಕೂಡಲೇ ಅಮಾನತ್ತು ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು ₹287 ಕೋಟಿ ಹಗರಣದಲ್ಲಿ ಸಿಲುಕಿ ಈ ಹಿಂದೆಯೇ ಸಚಿವರು ರಾಜೀನಾಮೆ ನೀಡಿದ್ದಾರೆ. ಸ್ವತಃ ಮುಖ್ಯಮಂತ್ರಿ ಮುಡಾ ಹಗರಣದಲ್ಲಿ ಸಿಲುಕಿದ್ದು ಇದೀಗ ಹನಿಟ್ರ್ಯಾಪ್ ವಿಚಾರದಲ್ಲಿ ಸಚಿವ ರಾಜಣ್ಣ ಗೃಹ ಸಚಿವರಿಗೆ ತನಿಖೆಗೆ ಪತ್ರ ಬರೆದಿದ್ದಾರೆ. ಇಂತಹ ಆರೋಪವನ್ನು ಸರ್ಕಾರದ ಪ್ರಮುಖ ಸಚಿವರೇ ಎದುರಿಸುತ್ತಿದ್ದಾರೆ. ಸ್ವಪಕ್ಷದಲ್ಲಿಯೇ ಸಚಿವರ ವಿರುದ್ಧ ಆರೋಪ ಮಾಡಿರುವುದು ಸರ್ಕಾರ ಯಾವ ರೀತಿ ಮುನ್ನಡೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.