ಮಂಗಳವಾರ, ಜನವರಿ 26, 2021
16 °C

ಕಾಡಾನೆ ಕಳೇಬರದಲ್ಲಿ ಗುಂಡು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆತ್ತೂರು: ಹೋಬಳಿಯ ಅರಣಿ ಸಮೀಪದ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದ ಕಾಡಾನೆಯ ಶವ ಪರೀಕ್ಷೆ ಮಾಡಿದ ವೇಳೆ ದೇಹದಲ್ಲಿ ಗುಂಡು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಆರೋಪಿಗಳ ಪತ್ತೆಗೆ ಶೋಧ ಮುಂದುವರಿಸಿದೆ.

ಯಸಳೂರು ಅರಣ್ಯ ವಲಯದಲ್ಲಿ ಜ. 2ರಂದು ಹಿಡುವಳಿ ಗದ್ದೆ ಪ್ರದೇಶದಲ್ಲಿ 20 ವರ್ಷದ ಹೆಣ್ಣಾನೆ ಶವ ಪತ್ತೆಯಾಗಿತ್ತು. ಕುತ್ತಿಗೆ ಭಾಗದಲ್ಲಿ ಗುಂಡು ದೊರೆತಿದ್ದು, ಆನೆಯ ದೇಹದಲ್ಲಿ ಸಿಕ್ಕಿರುವ ಕಬ್ಬಿಣದ ವಸ್ತುವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ನರಸಿಂಹಮೂರ್ತಿ ತಿಳಿಸಿದರು.

ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ತಮ್ಮ ಬೆಳೆ ರಕ್ಷಿಸಿಕೊಳ್ಳಲು ಅಥವಾ ಬೇಟೆಗಾರರು ಕಾಡು ಹಂದಿ ಎಂದು ತಪ್ಪು ಗ್ರಹಿಸಿ ಆನೆಗೆ ಗುಂಡು ಸಿಡಿಸಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು