ಹಾಸನ: ಕರ್ನಾಟಕದ ಬಂದ್ ಗೆ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿರುವುದರಿಂದ ಬಂದ್ ರೂಪುರೇಷೆ ಬಗ್ಗೆ ಚರ್ಚಿಸಲು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಡಿ. 29ಕ್ಕೆ ಸಂಜೆ 4 ಗಂಟೆಗೆ ವಿವಿಧ ಸಂಘಟನೆಗಳ ಸಭೆ ಕರೆಯಲಾಗಿದೆ ಎಂದು ಡಾ.ರಾಜ್ ಕುಮಾರ್ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಬಾಳ್ಳುಗೋಪಾಲ್ ಹೇಳಿದರು.

ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು, ರಾಯಣ್ಣ ಪ್ರತಿಮೆ ವಿರೂಪಗೊಳಿಸಿ, ಕನ್ನಡಿಗರ ಮೇಲೆದೌರ್ಜನ್ಯ ನಡೆಸಿದ ಎಂಇಎಸ್ ಪುಂಡರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಂಇಎಸ್ ಮುಖಂಡನ ಮುಖಕ್ಕೆ ಮಸಿ ಬಳಿದ ಕನ್ನಡಿಗರ ವಿರುದ್ಧ ಕೊಲೆ ಯತ್ನ ಕೇಸು ಹಾಕಲಾಗಿದೆ. ಹಾಗಾಗಿ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್ ಗೆಕರೆ ಕೊಟ್ಟಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಬಂದ್ ಮಾಡುವ ಅಗತ್ಯ ಇಲ್ಲ. ಅದರಿಂದ ಏನೂ ಪ್ರಯೋಜನ ಇಲ್ಲ ಎಂದುಕೆಲವರು ಹೇಳಿಕೆ ನೀಡುತ್ತಿದ್ದಾರೆ. ಬಂದ್ ಗೆ ಬೀದಿಬದಿ ವರ್ತಕರು, ಕೂಲಿ ಕಾರ್ಮಿಕರು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ, ಸ್ವಾಭಿಮಾನಿ ಬಣ,ನಾರಾಯಣಗೌಡರ ಬಣ, ಸಾ.ರಾ. ಗೋವಿಂದ್, ರೈತ, ಸಿಐಟಿಯು, ಹಮಾಲಿ ಸೇರಿದಂತೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್ ಯಶಸ್ವಿಗೊಳಿಸಲಾಗುವುದು. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಚಾರದಲ್ಲಿ ಧಕ್ಕೆ ಉಂಟಾದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಳಗದ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್,ಸ್ವಾಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹರೀಶ್ ಗೌಡ, ಆಟೋ ಚಾಲಕರ ಸಂಘದ ಅಧ್ಯಕ್ಷಸಮೀರ್, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದಿನೇಶ್, ಟಿಪ್ಪು ಸಂಘರ್ಷ ಸಮಿತಿಜಿಲ್ಲಾಧ್ಯಕ್ಷ ಮುಬಾಶೀರ್ ಅಹಮದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.