ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಲೂರು | ಬೈಕ್‌ಗೆ ಬಸ್‌ ಡಿಕ್ಕಿ: ಸವಾರ ಸಾವು

Published 6 ಡಿಸೆಂಬರ್ 2023, 14:22 IST
Last Updated 6 ಡಿಸೆಂಬರ್ 2023, 14:22 IST
ಅಕ್ಷರ ಗಾತ್ರ

ಆಲೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕಸಬಾ ಭೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೃಷಿ ಕಾರ್ಮಿಕ ಬ್ಯಾಡರಹಳ್ಳಿ ಗ್ರಾಮದ ಯತೀಶ್ (45) ಮೃತಪಟ್ಟವರು.

ಡಿ. 4ರಂದು ರಾತ್ರಿ ಬಸ್‌ ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಯತೀಶ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಬುಧವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT