ನುಗ್ಗೇಹಳ್ಳಿ: ಹೋಬಳಿ ಕೇಂದ್ರದಿಂದ ದಿನನಿತ್ಯ ಚನ್ನರಾಯಪಟ್ಟಣದ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು ಚನ್ನರಾಯಪಟ್ಟಣ ತಾಲ್ಲೂಕು ಕೇಂದ್ರಕ್ಕೆ ಶಾಲೆ, ಕಾಲೇಜುಗಳಿಗೆ ಹೋಗಲು ಬೆಳಗಿನ ವೇಳೆಯಲ್ಲಿ ಬಸ್ ವ್ಯವಸ್ಥೆ ಸರಿಯಿಲ್ಲ.

‘ಕೆಎಸ್ಆರ್ಟಿಸಿ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬೆಳಿಗ್ಗೆ 7 ಗಂಟೆಯಿಂದ 8.30ರವರೆಗೆ 2ರಿಂದ 3 ಬಸ್ ಮಾತ್ರ ಸಂಚರಿಸುವುದರಿಂದ ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿ ಬರುತ್ತವೆ. ಆದರೆ ಇಲ್ಲಿನ ಬಸ್ ನಿಲ್ದಾಣದಲ್ಲಿ ಕಾಯುವ ವಿದ್ಯಾರ್ಥಿಗಳು ಪ್ರಾಣದ ಹಂಗನ್ನು ತೊರೆದು ಬಸ್ ಫುಟ್ ಬೋರ್ಡ್ ಮೇಲೆ ನಿಂತು ಚನ್ನರಾಯಪಟ್ಟಣಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್ ಸಮಸ್ಯೆ ಹೇಳಿದರು.

‘ಶೀಘ್ರ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ಧರ್ಮಸ್ಥಳ ಪಾದಯಾತ್ರೆ ಸಮಿತಿ ಅಧ್ಯಕ್ಷ ಹೋಟೆಲ್ ರಾಜಣ್ಣ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.