ಹಿರೀಸಾವೆ: ಇಲ್ಲಿನ ಶ್ರೀಕಂಠಯ್ಯ ವೃತ್ತದಲ್ಲಿ ಜನರಿಗಾಗಿ ಎರಡು ಬಸ್ ತಂಗುದಾಣ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಸೋಮವಾರ ಹೇಳಿದರು.

ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಕಡೆಗೆ ಹೋಗುವ ಸರ್ವಿಸ್ ರಸ್ತೆಯಲ್ಲಿ ಮತ್ತು ಶ್ರವಣಬೆಳಗೊಳ ರಸ್ತೆಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿ ನಡೆಯಲಿದೆ. ಇಲ್ಲಿನ ಎನ್. ಗಂಗಾಧರ್ ಕ್ರೀಡಾಂಗಣ ಅಭಿವೃದ್ಧಿಗೆ ₹ 10 ಲಕ್ಷ ಅನುದಾನ ನೀಡಲಾಗಿದೆ. ರೈತ ಸಂಪರ್ಕ ಕೇಂದ್ರ ಕಟ್ಟಡದ ಕಾಮಗಾರಿಯನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದರು.

ವಿದ್ಯಾರ್ಥಿನಿಲಯದ ವಸತಿ ನಿಲಯದ ಕಟ್ಟಡ ಕಟ್ಟಲು ₹ 4 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನರೇಗಾ ಯೋಜನೆಯಲ್ಲಿ ₹ 6 ಕೋಟಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರಂಡಿಗಳನ್ನು, ರಾಜ್ಯ ಹೆದ್ದಾರಿ 8ರ ಡಿಸಿಸಿ ಬ್ಯಾಂಕ್ ಬಳಿ ₹ 1 ಕೋಟಿ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ 75ರ ಅಂಬೇಡ್ಕರ್ ವೃತ್ತ ಮತ್ತು ಗನ್ನಿ ಬಸವೇಶ್ವರ ವೃತ್ತದ ಬಳಿ ಹೆಚ್ಚು ಅಪಘಾತವಾಗುತ್ತಿದ್ದು, ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್, ಮುಖಂಡರಾದ ರಾಮಕೃಷ್ಣ, ರವಿಕುಮಾರ್, ವೆಂಕಟೇಶ್, ಬೋರಣ್ಣ, ದಲಿತ ಸಂಘಟನೆ ಮಧು, ಬೀಡಾ ಮಂಜುನಾಥ್, ದಿನೇಶ್, ಬೋರೇಗೌಡ, ನರಸಿಂಹಮೂರ್ತಿ, ನಾಗೇಶ್, ರೋಡ್ ಮಂಜುನಾಥ್, ಡಾಬಬಾಬು, ಪುಟ್ಟರಾಜು, ಬಾಲಾಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.