ಶುಕ್ರವಾರ, ಡಿಸೆಂಬರ್ 4, 2020
24 °C
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿಕೆ

ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ‌ ಬಿಟ್ಟ ವಿಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಪಕ್ಷದ ಮೇಲೆ ವಿಶ್ವಾಸವಿದ್ದು ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಆಡಳಿತವನ್ನು ರಾಜ್ಯದ ಜನತೆ ಒಪ್ಪಿದ್ದಾರೆ ಎಂಬುದಕ್ಕೆ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಆರ್.ಆರ್. ನಗರದಲ್ಲಿ ನಾನೂ ಒಬ್ಬ ಅಭ್ಯರ್ಥಿ ಎಂಬ ರೀತಿಯಲ್ಲಿ ಕೆಲಸ ಮಾಡಿದ್ದೇನೆ. 2018ರ ಚುನಾವಣೆಯಲ್ಲೇ ಬಿಜೆಪಿ 80 ಸಾವಿರ ಮತ ಗಳಿಸಿತ್ತು. ಮುನಿರತ್ನ ಅವರ ಮಾನವೀಯತೆಗೆ ಮತದಾರರು ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

ಸಾಮೂಹಿಕವಾಗಿ ಕೆಲಸ ಮಾಡಿದ ಪರಿಣಾಮ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ನಾಲ್ಕು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.