ಮಂಗಳವಾರ, ಜನವರಿ 19, 2021
17 °C

ಸಂಪುಟ ವಿಸ್ತರಣೆ: ಯಾವುದೇ ಗೊಂದಲ ಇಲ್ಲ

ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

ಹಾಸನ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟದಲ್ಲಿ ಹೊಸಬರು ಇರ್ತಾರೋ ಅಥವಾ ಇಲ್ಲವೋ ಎನ್ನುವುದು ಬುಧವಾರ ಗೊತ್ತಾಗಲಿದೆ. ವಿಸ್ತರಣೆಯಿಂದ ಅಸಮಾಧಾನ ಭುಗಿಲೆದ್ದಿಲ್ಲ, ಬೆಂಕಿಯೂ ಬಿದ್ದಿಲ್ಲ. ಎಲ್ಲರ ಸಹಮತದಿಂದಲೇ ವಿಸ್ತರಣೆಯಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ನಾಯಕತ್ವ ನಿಶ್ಚಯ ಮಾಡುವುದು ಸಿದ್ದರಾಮಯ್ಯನಾ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಮೊದಲು ತಮ್ಮ ಸ್ಥಾನ, ಮಾನ ಉಳಿಸಿಕೊಳ್ಳಲು ಯೋಚಿಸಲಿ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು