ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಣ್ಣು ಪರೀಕ್ಷೆ ಮಾಡದೆ ಕಾರ್ಡ್‌ ವಿತರಣೆ; ಆರೋಪ
Last Updated 7 ಡಿಸೆಂಬರ್ 2021, 15:38 IST
ಅಕ್ಷರ ಗಾತ್ರ

ಹಾಸನ: ‘ಮಣ್ಣಿನ ಪರೀಕ್ಷೆ ನಡೆಸದೇ ಮಣ್ಣಿನ ಆರೋಗ್ಯ ಕಾರ್ಡ್‌ ವಿತರಿಸುತ್ತಿದ್ದು, ಈ ಬಗ್ಗೆ ಸೂಕ್ತತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿಹಿರಿಯ ನಾಗರಿಕರ ವೇದಿಕೆಯಿಂದ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರ ರೈತರ ಜಮೀನಿನ ಮಣ್ಣಿನ ಆರೋಗ್ಯ ಪರೀಕ್ಷೆ ನಡೆಸಿ ಮಣ್ಣಿನ ಆರೋಗ್ಯ ಕಾರ್ಡ್ವಿತರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದೆ. ಆದರೆ, ಜಿಲ್ಲೆಯಲ್ಲಿ ಕೃಷಿ ಇಲಾಖೆಅಧಿಕಾರಿಗಳು ರೈತರ ಜಮೀನಿಗೆ ತೆರಳಿ ಮಣ್ಣಿನ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸದೆಕಚೇರಿಯಲ್ಲಿ ಕುಳಿತು ಮಣ್ಣಿನ ಆರೋಗ್ಯ ಕಾರ್ಡ್ ವಿತರಿಸುವ ಮೂಲಕ ಕೋಟ್ಯಂತರ ರೂಪಾಯಿದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಮಣ್ಣು ಪರೀಕ್ಷೆ ನಡೆಸಲು 2016-17 ನೇ ಸಾಲಿನಲ್ಲಿ ₹ 1,94,048,2027-18ರಲ್ಲಿ ₹ 25,23,620, 2018-19ರಲ್ಲಿ ₹75,093, 2019-20ನೇ ಸಾಲಿನಲ್ಲಿ ₹ 1,20,714 ವೆಚ್ಚಮಾಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಈ ವೆಚ್ಚಗಳುರೂಪಾಯಿಯೋ, ಸಾವಿರವೋ ಅಥವಾ ಲಕ್ಷವೋ ಎಂಬುದು ತಿಳಿಯುತ್ತಿಲ್ಲ. ಈ ಸಂಬಂಧವೇದಿಕೆಯ ಪದಾಧಿಕಾರಿಗಳು ಹಾಸನದ ಸುತ್ತಮುತ್ತಲ ಹಳ್ಳಿಗಳಿಗೆ ಭೇಟಿ‌ ನೀಡಿ ಪರಿಶೀಲಿಸಿದಾಗಯಾವುದೇ ಅಧಿಕಾರಿಗಳು ಜಮೀನಿಗೆ ಬಂದು‌ ಮಣ್ಣು ಪರೀಕ್ಷೆ ನಡೆಸಿಲ್ಲ’ ಎಂದು ಹೇಳುತ್ತಾರೆ ಎಂಧರು.

ಮಲೆನಾಡು ಭಾಗದಲ್ಲಿ ಹೆಚ್ಚಿರುವ ಆನೆಗಳ ಉಪಟಳ ತಡೆಗೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿಕವಿತಾ ರಾಜರಾಂ ಅವರಿಗೆ ಮನವಿ ಸಲ್ಲಿಸಲಾಯಿತು.

ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವೈ.ಎಸ್. ವೀರಭದ್ರಪ್ಪ, ಜಯಲಕ್ಷ್ಮಿ ರಾಜಣ್ಣಗೌಡ, ಆರ್.ಪಿ. ವೆಂಕಟೇಶಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಮಂಜುನಾಥ್, ಸಹ ಕಾರ್ಯದರ್ಶಿಪುಟ್ಟರಾಜೇಗೌಡ, ಖಜಾಂಚಿ ರಮೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT