ಶನಿವಾರ, ಜನವರಿ 23, 2021
19 °C

ಕಾರು ಡಿಕ್ಕಿ: ಮನೆ ಮೇಲೆ ಉರುಳಿದ ಮರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಕಲಗೂಡು: ಕಾರು ಗುದ್ದಿ ತೆಂಗಿನ ಮರ ಮನೆಯ ಮೇಲೆ ಉರುಳಿ ಬಿದ್ದ ಘಟನೆ ಸಮೀಪದ ಅಂಕನಾಯಕನ ಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕೆ.ಆರ್. ನಗರದಿಂದ ಹಾಸನಕ್ಕೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಗುದ್ದಿ ಸ್ವಾಮಿಗೌಡ ಅವರ ಮನೆಯ ಮೇಲೆ ಉರುಳಿ ಬಿದ್ದಿದೆ. ಇದರಿಂದ ಹೆಂಚುಗಳು ಮನೆಯಲ್ಲಿ ಮಲಗಿದ್ದ ಲಕ್ಷ್ಮಮ್ಮ ಅವರ ಮೇಲೆ ಬಿದ್ದು ಸಣ್ಣ ಪುಟ್ಟಗಾಯಗಳಾಗಿವೆ. ನಂತರ ಕಾರುವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಕಂಬವೂ ಮುರಿದು ಬಿದ್ದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು