ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರಕಲಗೂಡು | ಹೆಚ್ಚುತ್ತಿರುವ ಜಾತಿ ಪದ್ಧತಿ: ಶಾಸಕ ಮಂಜು ಬೇಸರ

Published 15 ಆಗಸ್ಟ್ 2024, 13:40 IST
Last Updated 15 ಆಗಸ್ಟ್ 2024, 13:40 IST
ಅಕ್ಷರ ಗಾತ್ರ

ಅರಕಲಗೂಡು: ಜಾತ್ಯತೀತ ಹಾಗೂ ಧರ್ಮಾತೀತವಾಗಿ ಪರಕೀಯರ ವಿರುದ್ದ ಸುದೀರ್ಘ ಹೋರಾಟ ಮಾಡಿದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಆದರೆ ಇಂದು ಜಾತಿ ಪದ್ಧತಿ ಹೆಚ್ಚುತ್ತಿರುವುದು ಬೇಸರದ ಸಂಗತಿ ಎಂದು ಶಾಸಕ ಎ. ಮಂಜು ಹೇಳಿದರು.

ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಅವರು ಮಾತನಾಡಿದರು.

ಎಲ್ಲ ಧರ್ಮ, ವರ್ಗಗಳು ಒಟ್ಟಾಗಿ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಬಳಿಕ, ಜಾತಿಯ ವಿಷವರ್ತುಲ ಬಿಗಡಾಯಿಸುತ್ತಿದೆ. ಇದು ನಿಲ್ಲಬೇಕು. ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಬೇರೆಲ್ಲವನ್ನೂ ಬದಿಗೊತ್ತಿ ನಾವೆಲ್ಲ ಭಾರತೀಯರು ಎಂಬ ಭಾವನೆ ಮೂಡಿದಾಗ ಮಾತ್ರ ದೇಶಕ್ಕೆ ಸ್ವತಂತ್ರ್ಯ ಬಂದಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಕೆ.ಸಿ. ಸೌಮ್ಯಾ ಸಂದೇಶ ನೀಡಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ತಾಲ್ಲೂಕು ಪಂಚಾಯಿತಿ ಇಒ ಪ್ರಕಾಶ್, ಸಿಪಿಐ ವಸಂತ್, ಬಿಇಒ ನಾರಾಯಣ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾವಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಲ್ಲೂಕು ಕಚೇರಿ ಆವರಣದಿಂದ ಕಾರ್ಯಕ್ರಮದ ವೇದಿಕೆವರೆಗೆ ವಿದ್ಯಾರ್ಥಿಗಳು ಮತ್ತು ವಿವಿಧ ಸ್ತಬ್ದ ಚಿತ್ರಗಳ ಆಕರ್ಷಕ ಮೆರವಣಿಗೆ ನಡೆಯಿತು. ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮಧ್ಯರಾತ್ರಿ ಸ್ವಾತಂತ್ರ್ಯೋತ್ಸವ

ಅರಕಲಗೂಡು: ಆಂಗ್ಲರ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸಿ, ಸ್ವಾತಂತ್ರ್ಯ ಗಳಿಸಿಕೊಡುವಲ್ಲಿ ಸಾವಿರಾರು ರಾಷ್ಟ್ರಭಕ್ತರ ತ್ಯಾಗ ಬಲಿದಾನವಿದೆ. ಇದನ್ನು ಉಳಿಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಹಶೀಲ್ದಾರ್ ಕೆ.ಸಿ. ಸೌಮ್ಯಾ ತಿಳಿಸಿದರು.

ಪಟ್ಟಣದ ಪಾಳೇಗಾರ ಕೃಷ್ಣಪ್ಪನಾಯಕನ ಕೋಟೆ ಗಣಪತಿ ಕೊತ್ತಲು ಉದ್ಯಾನದಲ್ಲಿ  ಪ್ರಸನ್ನ ಗಣಪತಿ ಸೇವಾ ಸಮಿತಿ, ಸಂಗೀತ ವಿದ್ವಾಂಸ ಆರ್.ಕೆ. ಪದ್ಮನಾಭ ಅಭಿಮಾನಿಗಳ ಬಳಗ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕಗಳ ಸಹಯೋಗದಲ್ಲಿ  ಬುಧವಾರ ಮಧ್ಯರಾತ್ರಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅರಕಲಗೂಡು ಪ್ರಾಂತ್ಯವನ್ನು ಆಳ್ವಿಕೆ ಮಾಡಿರುವ ಪಾಳೇಗಾರ ಕೃಷ್ಣಪ್ಪನಾಯಕನ ಕೋಟೆ ಗಣಪತಿ ಕೊತ್ತಲು ಆವರಣದಲ್ಲಿ 20 ವರ್ಷಗಳಿಂದಲೂ ಆಗಸ್ಟ್ 14ರ ಮಧ್ಯರಾತ್ರಿ ಯುವಕರೆಲ್ಲಾ ದೇಶಭಕ್ತಿಯೊಂದಿಗೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಶಿಕ್ಷಕರಾದ ಪುರುಷೋತ್ತಮ, ಎ.ಬಿ. ಯತಿರಾಜ್, ಪ್ರವೀಣ್, ಆಟೋ ಧರ್ಮ, ಮನು, ಪುನೀತ್ ಗೌಡ, ರವಿವರ್ಧನ್, ಭೀಮರಾಜ್, ಕಾಫಿ ಗುರು, ಆಟೋವಿಜಿ, ಗ್ಯಾಸ್ ಚಂದು, ಶ್ರೀಧರ ದಾದಾ, ನಟರಾಜ್, ನರಸಿಂಹ, ರಮೇಶ್ ಇದ್ದರು. ನಂತರ ಸಿಹಿ ವಿತರಿಸಲಾಯಿತು.

ಅರಕಲಗೂಡಿನಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಅರಕಲಗೂಡಿನಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಅರಕಲಗೂಡು ಕೋಟೆ ಗಣಪತಿ ಕೊತ್ತಲ ಗಣಪತಿ ದೇವಸ್ಥಾನ ಸನ್ನಿಧಿಯಲ್ಲಿ ಬುಧವಾರ ಮಧ್ಯರಾತ್ರಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ತಹಶೀಲ್ದಾರ್‌ ಕೆ.ಸಿ. ಸೌಮ್ಯ ಪುರುಷೋತ್ತಮ ಯತಿರಾಜ್ ಪ್ರವೀಣ್ ಧರ್ಮ ಮನು ಪುನೀತ್ ಇತರರು ತ್ರಿವರ್ಣ ಧ್ವಜ ಪ್ರದರ್ಶಿಸಿ ಸಂಭ್ರಮಿಸಿದರು

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ  ಅಂಕ ಪಡೆದ ವಿದ್ಯಾರ್ಥಿಗಳನ್ನು ಅರಕಲಗೂಡು ತಾಲ್ಲೂಕು ಮಲ್ಲಿಪಟ್ಟಣ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಯೋಗೇಶ್ ಕುಮಾರ್ ಉಪಾಧ್ಯಕ್ಷೆ ಸುಮಿತ್ರಮ್ಮ ಸದಸ್ಯ ನಾಗರಾಜ್ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಶ್ವನಾಥ್ ಪ್ರಾಂಶುಪಾಲೆ ಚಂದ್ರಕಲಾ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT