ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಜಿಲ್ಲಾಧ್ಯಕ್ಷರ ಜನ್ಮದಿನ ಅದ್ದೂರಿ ಆಚರಣೆ: ಸಾರ್ವಜನಿಕರ ಆಕ್ಷೇಪ

Last Updated 4 ಸೆಪ್ಟೆಂಬರ್ 2021, 15:07 IST
ಅಕ್ಷರ ಗಾತ್ರ

ಹಳೇಬೀಡು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್‌ ಅವರು ಕೋವಿಡ್‌ ನಿಯಮ ಉಲ್ಲಂಘಿಸಿ ಶುಕ್ರವಾರ ರಾತ್ರಿ ಹುಟ್ಟುಹಬ್ಬವನ್ನು ಬೇಲೂರು ಹಾಗೂ ಹಗರೆಯಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಬೇಲೂರಿನಲ್ಲಿ ಬಸವೇಶ್ವರ ವೃತ್ತದಿಂದ ತೆರೆದ ವಾಹನದಲ್ಲಿ ಚನ್ನಕೇಶವ ದೇವಾಲಯದವರೆಗೆ ಮೆರವಣಿಗೆ ನಡೆಸಿದ್ದಾರೆ. ನೂರಾರು ಮಂದಿ ಭಾಗವಹಿಸಿದ್ದು, ಬಹುತೇಕರು ಮಾಸ್ಕ್ ಧರಿಸಿರಲಿಲ್ಲ. ಕನಿಷ್ಠ ಅಂತರ ಕಾಪಾಡಿರಲಿಲ್ಲ. ಮೆರವಣಿಗೆ ವೇಳೆ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿ ಸವಾರರು ತೊಂದರೆ ಅನುಭವಿಸಿದರು.

ಹಗರೆ ಗ್ರಾಮದಲ್ಲಿಯೂಡಿಜೆ ಅಬ್ಬರದೊಂದಿಗೆ ವೈಭವದಿಂದ ಆಚರಣೆ ನಡೆದಿದೆ. ಸಮುದಾಯ ಭವನದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಿಲ್ಲಾಧಿಕಾರಿ ಆರ್‌.ಗಿರೀಶ್ ಪ್ರತಿಕ್ರಿಯಿಸಿ, ‘ಕೋವಿಡ್‌ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿರುವುದು ಗಮನಕ್ಕೆ ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಬಂದ ಬಳಿಕ ಕ್ರಮ‌ ಕೈಗೊಳ್ಳಲಾಗುವುದು’ ಎಂದು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT