ಹಾಸನ: ‘ಬಾಳೆಹೊನ್ನೂರಿನ ಕೇಂದ್ರ ಕಾಫಿ ಸಂಶೋಧನಾ ಕೇಂದ್ರದ (ಸಿಸಿಆರ್ಐ) ಶತಮಾನೋತ್ಸವದ ಅಂಗವಾಗಿ ಕಾಫಿ ಮಂಡಳಿ ವತಿಯಿಂದ ಡಿ. 20ರಿಂದ 22ರವರೆಗೆ ಮೂರು ದಿನಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಕಾಫಿ ಮಂಡಳಿ ಸದಸ್ಯ ಉದಯ್ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಾಫಿ ಉದ್ಯಮದ ಸವಾಲು ಮತ್ತು ಪರಿಹಾರ, ತಾಂತ್ರಿಕ ಮತ್ತು ವೈಜ್ಞಾನಿಕ ಅಂಶಗಳನ್ನು ಒಳಗೊಳ್ಳುವ ಬಗ್ಗೆ, ಮಾನವ ಪ್ರಾಣಿ ಸಂಘರ್ಷ, ವಿಶೇಷ ಕಾಫಿ ಮತ್ತು ಜಾಗತಿಕ ಮಾರುಕಟ್ಟೆ ವಿಷಯ ಸೇರಿ ಹತ್ತು ಚರ್ಚಾಗೋಷ್ಠಿಗಳು ನಡೆಯಲಿವೆ. ಸಮಗ್ರ ಕೃಷಿ ಆರ್ಥಿಕ ನಿರ್ವಹಣೆ, ಮಣ್ಣು ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಕಾಫಿ ಬೆಳೆಯುವ ವಿಧಾನ, ಕಾಫಿ ತೋಟಗಳ ನಿರ್ವಹಣೆ ಬಗ್ಗೆ ಕಾರ್ಯಾಗಾರಗಳು ನಡೆಯಲಿವೆ. ಇದೇ ವೇಳೆ, ಕಾಫಿಯ ಎರಡು ಹೊಸ ತಳಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ’ ಎಂದರು.

‘1925ರಲ್ಲಿ ಮೈಸೂರು ಮಹಾರಾಜರ ಆಡಳಿತ ಸಂದರ್ಭದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯು ಕಾಫಿ ಬೆಳೆಯಲ್ಲಿ ಎರಡು ಜಿ.ಐ. ಟ್ಯಾಗ್ಗಳನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಭಾರತೀಯ ಕಾಫಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ್ದರೂ ಬ್ರ್ಯಾಂಡಿಂಗ್ ಸಮಸ್ಯೆ ಇದೆ. ಭಾರತೀಯ ಕಾಫಿ ಬ್ರ್ಯಾಂಡಿಂಗ್ ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಾಗುವುದು. ರಾಜ್ಯ, ಹೊರ ರಾಜ್ಯಗಳಿಂದ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ’ ಎಂದರು.

‘ಉದ್ಘಾಟನೆ ಸಮಾರಂಭದಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಕೇಂದ್ರ ವಾಣಿಜ್ಯ ಖಾತೆ ರಾಜ್ಯ ಸಚಿವ ಜಿತೇಂದ್ರ ಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಸಮಾವೇಶ ಭಾಗವಹಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.