ಶುಕ್ರವಾರ, ಮೇ 20, 2022
24 °C
ಕೊಠಡಿಗಳ ಸ್ಯಾನಿಟೈಸ್‌ ಕಡ್ಡಾಯ: ಎಡಿಸಿ ಕವಿತಾ

ಸಿಇಟಿ: ಹಾಸನ ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭಿಸುವ ಮುನ್ನ ಹಾಗೂ ನಂತರ ಕಡ್ಡಾಯವಾಗಿ ಕೊಠಡಿಗಳಿಗೆ ಸ್ಯಾನಿಟೈಸ್‌ ಮಾಡಬೇಕು ಎಮದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ಎಸ್.ರಮ್ಯಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಿಇಟಿ ಪರೀಕ್ಷೆ ಕುರಿತು ಎಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಜತೆ ಶನಿವಾರ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು. ಥರ್ಮಲ್ ಸ್ಕ್ಯಾನರ್, ಕೈಗವಸು ಮತ್ತು ಮಾಸ್ಕ್‌ಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದರು ಹೇಳಿದರು.

ಕಂಟೆನೇಮೆಂಟ್‌ ವಲಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಬಾರದು. ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರಿಕ್ಷಾ ಕೇಂದ್ರ ವ್ಯವಸ್ಥೆ ಮಾಡಬೇಕು. ಪ್ರತಿ ಕೊಠಡಿಯಲ್ಲಿ 12 ಡೆಸ್ಕ್‌ ಹಾಗೂ 24 ವಿದ್ಯಾರ್ಥಿಗಳಿರುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಸುಸ್ಥಿತಿಯಲ್ಲಿರಬೇಕು. ಪರೀಕ್ಷಾ ಕೊಠಡಿಗೆ ನೀರಿನ ಬಾಟೆಲ್ ಹಾಗೂ ಸ್ಯಾನಿಟೈಸರ್ ಕೊಂಡೊಯ್ಯಲು ಅವಕಾಶ ನೀಡಬಹುದು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಸಿಬ್ಬಂದಿಗೂ ಸೋಂಕಿನ ಲಕ್ಷಣ ಇಲ್ಲದೇ ಇರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಪರೀಕ್ಷಾ ಕೇಂದ್ರದ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಈಗಾಗಲೇ 16 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಹಾಲಿಂಗಯ್ಯ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು