ಸೋಮವಾರ, ಮೇ 16, 2022
22 °C
ಹಗರೆ ಗ್ರಾಮ ಪಂಚಾಯಿತಿ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ತೆರೆದ ವಾಹನದಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ಹಗರೆ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಪ್ರಭಾ ಮಹೇಶ್ ಅಧ್ಯಕ್ಷರಾಗಿ ಮತ್ತು ಮಂಜುನಾಥ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಒಟ್ಟು 25 ಸದಸ್ಯರನ್ನು ಹೊಂದಿರುವ ಹಗರೆ ಗ್ರಾ.ಪಂ.ನ ಅಧ್ಯಕ್ಷ ಸ್ಥಾನಕ್ಕೆ ಪ್ರಭಾ ಮಹೇಶ್ ಮತ್ತು ಜಯಲಕ್ಷ್ಮೀ, ಉಪಾಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಮತ್ತು ಧರ್ಮ ನಾಮಪತ್ರ ಸಲ್ಲಿಸಿದ್ದರು. ಪ್ರಭಾ ಮಹೇಶ್ 12 ಮತ ಪಡೆದು ಅಧ್ಯಕ್ಷರಾಗಿ ಮತ್ತು ಮಂಜುನಾಥ್ 13 ಮತ ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಬಿಜೆಪಿ ಬೆಂಬಲಿಗರು ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ,  ಸಿಹಿ ಹಂಚಿ ಸಂಭ್ರಮಿಸಿದರು.

ಚುನಾವಣಾಧಿಕಾರಿಯಾಗಿ ತಾ.ಪಂ ಕಾರ್ಯನಿರ್ವಾಣಾಧಿಕಾರಿ ರವಿಕುಮಾರ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕೋಶಾಧ್ಯಕ್ಷೆ ಸುರಭಿರಘು, ತಾಲ್ಲೂಕು ಉಪಾಧ್ಯಕ್ಷ ಡಿಶಾಂತ್ ಕುಮಾರ್ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು