ಚನ್ನರಾಯಪಟ್ಟಣ: ‘ಮನುಷ್ಯನ ಆರೋಗ್ಯದಂತೆ ಭೂಮಿಯ ಆರೋಗ್ಯ ಕಾಪಾಡುವುದು ತುಂಬಾ ಮುಖ್ಯವಾದುದು’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದಲ್ಲಿ ಕೃಷಿ ಇಲಾಖೆ, ಕೃಷಿಕ ಸಮಾಜದದ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಭೂಮಿಯ ಆರೋಗ್ಯ ಚೆನ್ನಾಗಿದ್ದರೆ ಉತ್ತಮ ಫಸಲು ಬರುತ್ತದೆ. ತೆಂಗು, ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಹೈನುಗಾರಿಕೆಯಲ್ಲಿ ರಾಜ್ಯದಲ್ಲಿಯೇ ತಾಲ್ಲೂಕು ನಾಲ್ಕನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಕೆರೆಗಳಿಂದ ಅವೈಜ್ಞಾನಿಕವಾಗಿ ಹೂಳು ಎತ್ತಬಾರದು. ಸರ್ಕಾರ ಮತ್ತು ಗ್ರಾಮ ಅಭಿವೃದ್ಧಿ ಸಂಘದ ನೆರವಿನೊಂದಿಗೆ ಕೆರೆಗಳನ್ನು ಸಂರಕ್ಷಿಸಬೇಕು ಎಂದರು. ತಾಲ್ಲೂಕಿನ ಗಡಿಭಾಗ ದಿಡಗ ಗ್ರಾಮದಲ್ಲಿ ರಾಗಿ ಖರೀದಿ ಕೇಂದ್ರವನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ರಾಜ್ಯರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ ಮಾತನಾಡಿ, ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಳೆಗಳಿಗೆ ವೈಜ್ಞಾನಿಕ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಎತ್ತಿನಗಾಡಿ ಮೆರವಣಿಗೆ ನಡೆಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎನ್. ಲೋಕೇಶ್, ಕೃಷಿ ಇಲಾಖೆಯ ನಿವೃತ್ತ ಜಂಟಿನಿರ್ದೇಶಕ ಆರ್.ಜಿ. ಗೊಲ್ಲರ್ ಮಾತನಾಡಿದರು. 8 ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ್ ಜಿ.ಎಸ್ ಶಂಕರಪ್ಪ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸಿ.ಜಿ. ರವಿ, ಮಹಿಳಾ ಘಟಕದ ಅದ್ಯಕ್ಷೆ ಪ್ರೇಮಮ್ಮ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಮೋಹನ್ಕುಮಾರ್, ತಾಲ್ಲೂಕು ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ವೈ.ಎನ್. ಗುರುಪ್ರಸಾದ್, ಬಿ.ಆರ್. ಯೋಗೀಶ್, ಡಿ.ಜೆ. ಮಧುಸೂದನ್, ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ಉಮೇಶ್, ಕೃಷಿಪರಿಕರ ಮಾರಾಟಗಾರ ಸಂಘದ ಪದಾಧಿಕಾರಿಗಳಾದ ಕುಮಾರ್, ಸತೀಶ್, ಕೃಷಿಕ ಸಮಾಜದ ರಾಜ್ಯಪ್ರತಿನಿಧಿ ಶಿವೇಗೌಡ, ಅಧಿಕಾರಿಗಳಾದ ರಶ್ಮೀ, ದಿನೇಶ್, ಕಲಾವಿದರಾದ ಗೋವಿಂದರಾಜ್, ಸುಧಾ ಭಾಗವಹಿಸಿದ್ದರು.

ಕಾರ್ಯಕ್ರಮ ಮುಂದೂಡಿಕೆ

ಚನ್ನರಾಯಪಟ್ಟಣ: ‘ಹಾಸನ-ಸೊಲ್ಲಾಪುರ ರೈಲು ಚನ್ನರಾಯಪಟ್ಟಣದ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಡಿ.26ಕ್ಕೆ ರೈಲ್ವೆ ಖಾತೆ ರಾಜ್ಯಸಚಿವ ವಿ. ಸೋಮಣ್ಣ ಚಾಲನೆ ನೀಡುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. ಹಾಸನ-ಸೊಲ್ಲಾಪುರ ರೈಲು ಶ್ರವಣಬೆಳಗೊಳದಲ್ಲಿ ಮಾತ್ರ ನಿಲುಗಡೆಯಾಗುತ್ತಿತ್ತು. ಚನ್ನರಾಯಪಟ್ಟಣದಲ್ಲಿಯೂ ನಿಲುಗಡೆ ನೀಡಿದರೆ ಪ್ರಯಾಣಿಕರಿಗೆ ಮಂತ್ರಾಲಯಕ್ಕೆ ಪ್ರಯೋಜನವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.