ಚನ್ನರಾಯಪಟ್ಟಣ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುರಸಭೆಯನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶುಕ್ರವಾರ ಮೂರನೇ ದಿನಕ್ಕೆ ಮುಂದುವರಿದಿದೆ.

ಪಟ್ಟಣದಲ್ಲಿ ಪುರಸಭಾ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಂಘದ ಪದಾಧಿಕಾರಿ ಲೋಕೇಶ್ ಮಾತನಾಡಿ, ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸೌಲಭ್ಯ ಒದಗಿಸಬೇಕು. ಜ್ಯೋತಿಸಂಜೀವಿನಿ, ಕೆಜಿಐಡಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಕಾರ್ಮಿಕರು ಸಂಘಟನೆಯಾಗಿದ್ದಾಗ ಬೇಡಿಕೆ ಈಡೇರಲು ಸಾದ್ಯವಾಗುತ್ತದೆ. ಪೌರನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಶಾಸಕ ಬಾಲಕೃಷ್ಣ ಮಾತನಾಡಿ, ಪೌರಕಾರ್ಮಿಕರನ್ನು ಕಾಯಂ ಮಾಡುವ ಮೂಲಕ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವಂತಾಗಬೇಕು. ನ್ಯಾಯಯುತ ಬೇಡಿಕೆಗಳನ್ನು ರಾಜ್ಯಸರ್ಕಾರ ಈಡೇರಿಸಬೇಕು. ಮುಖ್ಯಮಂತ್ರಿ ಮತ್ತು ಪೌರಾಡಳಿತ ಸಚಿವರಿಗೆ ಪತ್ರ ಬರೆಯಲಾಗುವುದು ಎಂದರು.

ಶಾಸಕ ಬಾಲಕೃಷ್ಣ ಅವರೊಂದಿಗೆ ಪುರಸಭಾಧ್ಯಕ್ಷ ಸಿ.ಎಸ್. ಮೋಹನ್, ಪುರಸಭಾ ಸದಸ್ಯ ಗಣೇಶ್, ಮುಖ್ಯಾಧಿಕಾರಿ ಆರ್. ಯತೀಶ್ಕುಮಾರ್, ಟಿಎಪಿಸಿಎಂಎಸ್ ಅದ್ಯಕ್ಷ ಎಂ.ಆರ್. ಅನಿಲ್ಕುಮಾರ್, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.