ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಾಲ್ಲೂಕಿನ ದಂಡಿಗನಹಳ್ಳಿ ಸಮೀಪ ಶನಿವಾರ ಮುಂಜಾನೆ ಲಾರಿಗೆ ಹಿಂದಿನಿಂದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಚನ್ನರಾಯಟ್ಟಣ ತಾಲ್ಲೂಕಿನ ನವಿಲೆ ಬೋವಿ ಕಾಲೊನಿಯ ನಿವಾಸಿ, ಬಸ್ ಚಾಲಕ ಆನಂದ್ (46) ಮೃತಪಟ್ಟವರು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಆನಂದ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರು ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಕಲೇಶಪುರ ಡಿಪೊದ ಬಸ್ ಬೆಂಗಳೂರಿನಿಂದ ಹಾಸನ ಕಡೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಮುಂಭಾಗ ಜಖಂಗೊಂಡಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-36-1294326408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.