ಚನ್ನರಾಯಪಟ್ಟಣ: ಸಹಕಾರಿ ಕ್ಷೇತ್ರದಿಂದ ದೇಶದ ಪ್ರಗತಿ ಸಾಧ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಆವರಣದಲ್ಲಿ ₹5.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಟಿಎಪಿಸಿಎಂಎಸ್ ಆವರಣದಲ್ಲಿ ₹15 ಲಕ್ಷ ವೆಚ್ಚದಲ್ಲಿ ನೆಲಹಾಸು ಅಳವಡಿಸಲಾಗಿದೆ. ಅದೇ ರೀತಿ ಶೌಚಾಲಯ ನಿರ್ಮಿಸಲಾಗಿದೆ. ಗೊಬ್ಬರ ಮಾರಾಟ ಕೇಂದ್ರ ತೆರೆಯಲಾಗಿದೆ. ಎಟಿಎಂ ಕೇಂದ್ರ ಆರಂಭಿಸಲಾಗಿದೆ. 5 ರೂಪಾಯಿ ನಾಣ್ಯ ಅಥವಾ ಮೊಬೈಲ್ ಸ್ಕ್ಯಾನರ್ ಮೂಲಕ 20 ಲೀಟರ್ ನೀರು ಸಂಗ್ರಹಿಸಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಪಟ್ಟಣದ ಹಲವು ಕಡೆ ಶುದ್ಧ ಕುಡಿಯುವ ನೀರು ಘಟಕ ಆರಂಭಿಸಲಾಗಿದೆ’ ಎಂದರು.

‘ತಾಲ್ಲೂಕಿನಲ್ಲಿರುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಬಳಿ ಗೊಬ್ಬರ ಮಾರಾಟ ಉಪಕೇಂದ್ರವನ್ನು ಆರಂಭಿಸಲಾಗಿದೆ. ತಾಲ್ಲೂಕಿನಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೂಲ ಸೌಕರ್ಯ ಒದಗಿಸಲು ರಾಜ್ಯಸಹಕಾರ ಮಹಾಮಂಡಳದ ವತಿಯಿಂದ ₹1 ಕೋಟಿ ಅನುದಾನವನ್ನು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಸಿ.ಎನ್. ಪುಟಸ್ವಾಮಿಗೌಡ ಅನುದಾನ ಕೊಡಿಸಿದ್ದಾರೆ’ ಎಂದು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್.ವೆಂಕಟೇಶ್ ಮಾತನಾಡಿದರು. ಉಪಾಧ್ಯಕ್ಷೆ ತಾರಾಮಣಿ, ನಿರ್ದೇಶಕರಾದ ಕೆ.ಎನ್.ನಾಗರಾಜು, ರಮೇಶ್ ಕಂಬಾರಹಳ್ಳಿ, ಟಿ.ಎನ್.ನಂಜುಂಡೇಗೌಡ, ಮಮತಾ, ನಾಗರಾಜು, ಕೆ.ಆರ್.ರವಿಕುಮಾರ್, ಪಿ.ಉಮೇಶ್, ಎಂ.ಆರ್.ಅನಿಲ್ಕುಮಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆವಿಜಯೇಂದ್ರ ಭಾಗವಹಿಸಿದ್ದರು.

ಟಿಎಪಿಸಿಎಂಎಸ್ ಆವರಣದಲ್ಲಿ ಉಚಿತವಾಗಿ ಕೊಳವೆಬಾವಿ ಕೊರೆಸಿರುವ ಜಯಣ್ಣ ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-2009659466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.