ಚನ್ನರಾಯಪಟ್ಟಣ: ಪಂಚವಾರ್ಷಿಕ ಯೋಜನೆಯ ಅನುಷ್ಠಾನ, ಶಿಕ್ಷಣ, ಸಾಮಾಜಿಕ, ಆರ್ಥಿಕ ಕ್ಷೇತ್ರ, ಮಾಹಿತಿ, ಜೈವಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ಸದೃಢವಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಪ್ರಪಂಚದಲ್ಲಿ ಭಾರತ 5ನೇ ಪ್ರಬಲ ಆರ್ಥಿಕ ಶಕ್ತಿ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಹಸಿರು ಕ್ರಾಂತಿ ಅನುಷ್ಠಾನದಿಂದ ಆಹಾರ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದ್ದು, ವಿದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಸಂಕಷ್ಟದಲ್ಲಿರುವ ರಾಷ್ಟ್ರಗಳಿಗೆ ಅಭಯಹಸ್ತ ಚಾಚಿದೆ. ಜಾತ್ಯತೀತ ತಳಹದಿಯ ಮೇಲೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಒದಗಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ’ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ವಿ.ಎಸ್. ನವೀನ್ಕುಮಾರ್ ಮಾತನಾಡಿ, ‘ಭಾರತಕ್ಕೆ ಅಂಬೇಡ್ಕರ್ ಸೂಕ್ತ ಸಂವಿಧಾನ ರಚಿಸಿದ್ದಾರೆ. ದೇಶಕ್ಕೆ ಸಂವಿಧಾನವೇ ಆಧಾರ’ ಎಂದರು.

ವಿವಿಧ ಕ್ಷೇತ್ರಗಳ 30 ಸಾಧಕರನ್ನು ಸನ್ಮಾನಿಸಲಾಯಿತು. ಪುರಸಭಾಧ್ಯಕ್ಷೆ ಕೆ.ಎನ್. ಬನಶಂಕರಿ, ಉಪಾಧ್ಯಕ್ಷೆ ರಾಣಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್.ಮೂರ್ತಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎನ್. ಲೋಕೇಶ್, ಡಿವೈಎಸ್ಪಿ ಎನ್. ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಜಿ.ಆರ್. ಹರೀಶ್, ಬಿಇಒ ಎಚ್.ಎನ್. ದೀಪಾ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಎ.ಎಸ್. ಇಂದ್ರಾ, ಪುರಸಭೆಯ ಮುಖ್ಯಾಧಿಕಾರಿ ಆರ್. ಯತೀಶ್ಕುಮಾರ್, ಅಕ್ಷರ ದಾಸೋಹ ಅಧಿಕಾರಿ ಎಚ್.ಡಿ. ಉಮಾಶಂಕರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್.ಪಿ. ಪ್ರಕಾಶ್ಗೌಡ, ರೋಹಿತ್, ಮಹೇಶ್, ಗುರುಪ್ರಸಾದ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.