ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಮತ್ತು ಪುರಸಭಾ ಚುನಾವಣೆಯ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪಟ್ಟಣದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಭವನದ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಹಾವಳಿ ಇಲ್ಲದೇ ಎಲ್ಲಾ ವರ್ಗದ ಜನರಿಗೆ ಪರಿಪೂರ್ಣವಾಗಿ ತಲುಪುತ್ತಿದೆ. ಈ ತರಹ ಕೆಲಸವನ್ನು ಯಾವ ಸರ್ಕಾರವು ಮಾಡಿಲ್ಲ. ಜನರು ಯಾರ ಹತ್ತಿರ ಕೈಚಾಚುವ ಅಗತ್ಯ ಇಲ್ಲ. ಸಮಾಜದಲ್ಲಿ ಜನತೆ ಸ್ವಾಭಿಮಾನ, ಗೌರವದಿಂದ ಬಾಳಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಧ್ಯೇಯ’ ಎಂದರು.

‘ಚನ್ನರಾಯಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಭವನದ ಕಟ್ಟಡಕ್ಕೆ ಪಕ್ಷದ ಕಾರ್ಯಕರ್ತರು ಕನಿಷ್ಠ 100 ರೂಪಾಯಿ ದೇಣಿಗೆ ನೀಡಬಹುದು. ನಾಲ್ಕಾರು ಮುಖಂಡರು ಒಂದು ಕೋಟಿ ರೂಪಾಯಿ ಭರಿಸಿ ಕಟ್ಟಡ ನಿರ್ಮಿಸಬಹುದು. ಆದರೆ ಕಟ್ಟಡ ನಮ್ಮದು ಎಂಬ ಭಾವನೆ ಬರಬೇಕಾದರೆ ಕಾರ್ಯಕರ್ತರು ದೇಣಿಗೆ ನೀಡಬೇಕು. ನಾನು ಸಹ ನೆರವು ನೀಡುತ್ತೇನೆ’ ಎಂದರು.

ಸಂಸದ ಶ್ರೇಯಸ್ ಎಂ ಪಟೇಲ್ ಮಾತನಾಡಿ, ‘ಪಕ್ಷ ತಾಯಿ ಇದ್ದಂತೆ. ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು’ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಮಾತನಾಡಿ, ‘ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಭವನದ ಕಾಮಗಾರಿ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಎರಡು ಅಂತಸ್ತು ನಿರ್ಮಿಸಲಾಗುವುದು. ಎರಡನೇ ಅಂತಸ್ತಿನಲ್ಲಿ ನಿರುದ್ಯೋಗ ನಿವಾರಿಸುವ ದೃಷ್ಟಿಯಿಂದ ಯುವಕ, ಯುವತಿಯರಿಗೆ ಹೊಲಿಗೆ ಯಂತ್ರ ತರಬೇತಿ ಸೇರಿ ಉಪಯುಕ್ತ ತರಬೇತಿ ನೀಡಲಾಗುವುದು’ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಎಂ.ಕೆ. ಮಂಜೇಗೌಡ, ಜೆ.ಎಂ. ರಾಮಚಂದ್ರ ಮಾತನಾಡಿದರು. ರಾಜ್ಯವಿದ್ಯುತ್ ಕಾರ್ಖಾನೆಯ ಅಧ್ಯಕ್ಷ ಎಚ್.ಸಿ. ದೀಪು, ಕಟ್ಟಡ ನಿರ್ಮಾಣಕ್ಕೆ ₹15 ಲಕ್ಷ ಹಾಗು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುರಾಗ್ಮೂರ್ತಿ ಮತ್ತು ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷ ₹1 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು.

ಹೂಡಾ ಅಧ್ಯಕ್ಷ ಪಟೇಲ್ ಶಿವಪ್ಪ, ಪಕ್ಷದ ಕಾರ್ಯಾಧ್ಯಕ್ಷ ಶಶಿಕುಮಾರ್, ಮುಖಂಡರಾದ ಸಿ.ವಿ. ರಾಜಪ್ಪ, ಜಾವಗಲ್ ಮಂಜುನಾಥ್, ಎಚ್.ಕೆ. ಮಹೇಶ್, ಎಚ್.ಎಸ್. ವಿಜಯಕುಮಾರ್, ಎಂ. ಶಂಕರ್, ಪ್ರಸನ್ನ, ಎ.ಸಿ.ಆನಂದಕುಮಾರ್, ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಎನ್ ಮಂಜುನಾಥ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್.ಪಿ. ಪ್ರಕಾಶ್ ಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-768658073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.