ಚನ್ನರಾಯಪಟ್ಟಣ: ಭಗೀರಥ ಮಹರ್ಷಿ ತಪಸ್ಸಿನ ಶಕ್ತಿಯಿಂದ ಗಂಗೆಯನ್ನು ಭೂಮಿಗೆ ಇಳಿಸಿ ಸಕಲಜೀವಿಗಳಿಗೆ ಅನುಕೂಲ ಕಲ್ಪಿಸಿಕೊಟ್ಟ ಮಹಾನ್ ಚೇತನ ಎಂದು ತಹಶೀಲ್ದಾರ್ ಜಿ.ಎಸ್. ಶಂಕರಪ್ಪ ಹೇಳಿದರು.

ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ತಾಲ್ಲೂಕು ಆಡಳಿತ ಹಾಗು ಉಪ್ಪಾರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ ಭಗೀರಥ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘ದಾರ್ಶನಿಕರ ಜೀವನ ಚರಿತ್ರೆಯನ್ನು ಓದುವ ಮೂಲಕ ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಾಗಬೇಕು. ಸಹಬಾಳ್ವೆ, ಪರೋಪಕಾರ, ಸೇವಾ ಮನೋಭಾವ ರೂಢಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ಭವಿಷ್ಯದ ಪೀಳಿಗೆಗೆ ಇವರ ತತ್ವ, ಆದರ್ಶವನ್ನು ತಿಳಿಸಿಕೊಡಬೇಕಿದೆ’ ಎಂದು ಹೇಳಿದರು.

ಉಪ್ಪಾರ ಸಂಘದ ಅಧ್ಯಕ್ಷ ಜನಾರ್ಧನ್, ಪ್ರಧಾನ ಕಾರ್ಯದರ್ಶಿ ಎಸ್.ಎಂ. ನವೀನ್ಕುಮಾರ್ ಮಾತನಾಡಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್. ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಕೆಡಿಪಿ ಸದಸ್ಯ ಕೆ.ಟಿ. ಮಹೇಶ್, ಮುಖಂಡರಾದ ಲೋಕೇಶ್, ನಾಗೇಂದ್ರ, ಸಿ.ಆರ್. ಸುರೇಶ್, ಸತೀಶ್, ಪ್ರವೀಣ್, ನಾಗೇಶ್, ಮಂಜುನಾಥ, ಪಾಪಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-36-1869357867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.