ಚನ್ನರಾಯಪಟ್ಟಣ: ‘ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರ ಸೇರಿ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಲು ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯವೇ ಕಾರಣ. ಇದು ದೇಶದ ಅಭಿವೃದ್ಧಿಗೆ ಪೂರಕ’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಪರಿಶಿಷ್ಟಜಾತಿ ಮತ್ತು ವರ್ಗದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಮತ್ತು ತಾಲ್ಲೂಕು ಘಟಕದ ಸಹಯೋಗದಲ್ಲಿ ಈಚೆಗೆ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಸರ್ವರಿಗೂ ಸಮಪಾಲು ಸರ್ವರಿಗೂ ಸಹಬಾಳು ಒದಗಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಂವಿಧಾನವು ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಸಂವಿಧಾನವನ್ನು ಎಲ್ಲಾ ವಿದ್ಯಾರ್ಥಿಗಳು ಓದಬೇಕು. ಅದರಲ್ಲಿರುವ ಆದರ್ಶ ಅಳವಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ತಾಲ್ಲೂಕಿನಲ್ಲಿ ಪ್ರತಿ ವರ್ಷ ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಲಾಗುತ್ತಿದೆ ಎಂದರು.

ತಾಲ್ಲೂಕು ಕಚೇರಿ ಆವರಣದಲ್ಲಿ ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಚಿವ ಎಚ್.ಸಿ.ಮಹದೇವಪ್ಪ, ಮೇ 20ರ ನಂತರ ದಿನಾಂಕ ನಿಗದಿಗೊಳಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರ ದಿನಾಂಕ ನಿಗದಿಗೊಳಿಸಿ ಉದ್ಘಾಟನೆ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಸಮಾಜ ಕಲ್ಯಾಣ ಇಲಾಖೆಯ ಮೂಲ ಸೌಕರ್ಯ ವಿಭಾಗದ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ್ ಮಾತನಾಡಿ, ಶಿಕ್ಷಕ ವೃತ್ತಿ ಶ್ರೇಷ್ಠವಾದುದು. ವ್ಯಕ್ತಿ ಸರ್ವಾಂಗೀಣವಾಗಿ ಪ್ರಗತಿ ಹೊಂದಲು ಶಿಕ್ಷಣದಿಂದ ಸಾಧ್ಯ. ಅಧಿಕಾರಿಗಳಾಗಿ ಕೆಲಸ ಮಾಡುವಾಗ ನಮಗೆ ಸಂವೇದನಾಶೀಲತೆ ಅಗತ್ಯ ಎಂದರು.

ಪರಿಶಿಷ್ಟಜಾತಿ, ವರ್ಗದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಎಚ್.ಎನ್. ಮೂರ್ತಿ, ಮತ್ತು ನಿಕಟಪೂರ್ವ ಅಧ್ಯಕ್ಷ ಟಿ.ಮಂಜಪ್ಪ ಅವರನ್ನು ಸನ್ಮಾನಿಸಲಾಯಿತು. ದಲಿತ ಮುಖಂಡರು ಮತ್ತು ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಜಿಲ್ಲಾಧ್ಯಕ್ಷ ರಾಜೇಂದ್ರ ದೊಡ್ಡಮಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಸೇವಕ ಆರ್.ಲಕ್ಷ್ಮಿಕಾಂತ್, ಪದಾಧಿಕಾರಿಗಳಾದ ಸೋಮನಾಯಕ್, ಈಶ್ವರನ್, ಧರ್ಮಪ್ಪನಾಯಕ್, ಶಾಂತಮ್ಮ, ಬಿ.ಎಸ್.ರಾಜು, ಕೆ.ಪಿ.ವೀರೇಶ್, ಸಿ.ಡಿ.ಭಾರತಿ, ಲೋಕೇಶ್ ಕುಮಾರ್, ನಾಗರಾಜ್, ಎಚ್.ಡಿ.ಸೋಮೇಶ್, ಚಂದ್ರಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್.ವೆಂಕಟೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-36-412235224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.