ಚನ್ನರಾಯಪಟ್ಟಣ: ಹಿಂದುಳಿದ ವರ್ಗದವರ ಸರ್ವತೋಮುಖ ಪ್ರಗತಿ ಸಾಧಿಸಲು ಶೋಷಿತರ ಧನಿಯಾಗಿ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ. ಕೃಷ್ಣಪ್ಪ ಬಣದ ರಾಜ್ಯ ಅಧ್ಯಕ್ಷ ವೆಂಕಟಗಿರಿಯಯ್ಯ ಭಾನುವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದರೂ ಜನಸಾಮಾನ್ಯರ ಹಿತ ಕಾಪಾಡಿಲ್ಲ. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುತ್ತಿಲ್ಲ. ಪರಿಶಿಷ್ಟ ಜಾತಿ, ವರ್ಗದವರಿಗೆ ಮೀಸಲಿರಿಸಿದ್ದ ಅನುದಾನವನ್ನು ಬೇರೆಡೆಗೆ ವರ್ಗಾಯಿಸಿ ಜನರ ಕಣ್ಣು ಒರೆಸುವ ತಂತ್ರ ಅನುಸರಿಸಲಾಗುತ್ತಿದೆ. ಪರಿಶಿಷ್ಟ ವರ್ಗದವರಿಗೆ ಭೂಮಿ ಮಂಜೂರು ಮಾಡುತ್ತಿಲ್ಲ. ಅಗ್ಗದ ಕಾರ್ಯಕ್ರಮದ ಬದಲು ಜನರಿಗೆ ಅನುಕೂಲವಾಗುವ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಜನರಿಗೆ ಉಪಯೋಗವಾಗುವ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರೆ, ಜನರ ಬದುಕು ಹಸನಾಗುತ್ತದೆ. ಶೋಷಿತರು ಪ್ರಗತಿ ಹೊಂದಲು ಸಹಾಯಕವಾಗುತ್ತದೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಎಂದರು.

ಚನ್ನರಾಯಪಟ್ಟಣ ತಾಲ್ಲೂಕು ಘಟಕವನ್ನು ಪುನರ್ ರಚಿಸಲಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಗೋವಿಂದರಾಜು ಬೂಕ ಮತ್ತು ಹಾಸನ ಜಿಲ್ಲಾ ಘಟಕಕ್ಕೆ ನಾಗೇಶ್ ಅವರನ್ನು ಅಧ್ಯಕ್ಷರನ್ನಾಗಿ ತಾತ್ಕಾಲಿಕ ನೇಮಿಸಲಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಸಂಚರಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳು: ಅಧ್ಯಕ್ಷ- ಕೆ. ಉಮೇಶ್. ಸಂಘಟನಾ ಕಾರ್ಯದರ್ಶಿಗಳು- ಸಿ.ಬಿ. ಆನಂದ್, ಹರೀಶ್, ವೆಂಕಟೇಶ್, ಶಿವಕುಮಾರ್. ವೆಂಕಟೇಶ್ ಅವರನ್ನು ನೇಮಿಸಲಾಗಿದೆ ಎಂದರು.

ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆನಂದ್, ಮಂಡ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಶ್ಮಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-36-1237474734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.