ಚನ್ನರಾಯಪಟ್ಟಣ: ‘ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಪದ್ದತಿ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ತಾಲ್ಲೂಕಿನ ಶೆಟ್ಟಿಹಳ್ಳಿಯಲ್ಲಿ ಸೋಮವಾರ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಏರ್ಪಡಿಸಿದ್ದ ಅಲಸಂದೆ ಪ್ರಾತ್ಯಕ್ಷಿಕೆ ಹಾಗೂ ಪರಿಕರಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

‘ಈ ಬಾರಿ ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ಹಂಗಾಮಿನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಿರುವುದರಿಂದ ಇದುವರೆಗೆ ಯಾವುದೇ ಬೆಳೆ ಬಿತ್ತನೆ ಮಾಡಿಲ್ಲ. ಮಳೆ ಕೊರತೆಯ ಪರಿಣಾಮ ಕೊಳೆವೆ ಬಾವಿಯ ನೀರನ್ನು ಮಿತವಾಗಿ ಬಳಸಬೇಕು. ಈ ನಿಟ್ಟಿನಲ್ಲಿ ರೈತಾಪಿ ವರ್ಗದವರು ಹನಿ ನೀರಾವರಿ ಮತ್ತು ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವುದು ಉತ್ತಮ’ ಎಂದರು.

‘ತಾಲ್ಲೂಕಿಗೆ 31,759 ಟನ್ ರಸಗೊಬ್ಬರದ ಬೇಡಿಕೆ ಇದೆ. ಆದರೆ ಗೋದಾಮಿನಲ್ಲಿ 4,980 ಟನ್ ಮಾತ್ರ ದಾಸ್ತಾನು ಇದೆ. ಮುಂಬರುವ ದಿನಗಳಲ್ಲಿ ತಾಲ್ಲೂಕಿನ ರೈತರಿಗೆ ರಸಗೊಬ್ಬರದ ಕೊರತೆ ಕಾಡುವ ಸಾಧ್ಯತೆ ಇದೆ. ಹಾಗಾಗಿ ಕೇಂದ್ರ ಹಾಗೂ ರಾಜ್ಯಸರ್ಕಾರ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರದ ಪೂರೈಕೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.

ಎಫ್ಎನ್ಎಸ್ ಯೋಜನೆಯಡಿ ಎಲ್ಲಾ ಹೋಬಳಿಗಳ ವ್ಯಾಪ್ತಿಯಲ್ಲಿ ಒಂದೊಂದು ಹಳ್ಳಿಯನ್ನು ಆಯ್ಕೆಮಾಡಿಕೊಂಡು ಒಂದು ಹೆಕ್ಟೇರ್ಗೆ ತಲಾ 10 ಕೆ.ಜಿ ಅಲಸಂದೆ ಹಾಗೂ ಪರಿಕರಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದರು.

ಸಹಾಯಕ ಕೃಷಿ ನಿರ್ದೇಶಕ ಮೋಹನ್ಕುಮಾರ್ ಮಾತನಾಡಿ, 1351 ರೈತರ ಕೃಷಿ ಜಮೀನಿನಲ್ಲಿ ಮಣ್ಣು ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ರೈತರಿಗೆ ಮಣ್ಣಿನ ಫಲಿತಾಂಶದ ಪಟ್ಟಿ ನೀಡಿ ಅದರ ಆಧಾರದ ಮೇಲೆ ರಸಗೊಬ್ಬರವನ್ನು ಉಪಯೋಗಿಸುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಗ್ರಾಮದ ರೈತರಿಗೆ ಅಲಸಂದೆ ಹಾಗು ವಿವಿಧ ಪರಿಕರಗಳನ್ನು ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-593805383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.