ಚನ್ನರಾಯಪಟ್ಟಣ: ಅಗ್ನಿಶಾಮಕ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ನೇಮಿಸುವಂತೆ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದಲ್ಲಿ ಶನಿವಾರ ಹೊಸ ಅಗ್ನಿಶಾಮಕ ವಾಹನವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇವೆ. ಸದ್ಯ 56 ಸಾವಿರ ಹುದ್ದೆಗಳನ್ನು ತುಂಬಲು ರಾಜ್ಯ ಸರ್ಕಾರ ಮುಂದಾಗಿದೆ. ಅಗ್ನಿಶಾಮಕ ಠಾಣೆಗೆ ಸಿಬ್ಬಂದಿಯನ್ನು ನೇಮಕ ಮಾಡಬೇಕು, ಜನಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಅನುಸಾರವಾಗಿ ಸಿಬ್ಬಂದಿ ಸಂಖ್ಯೆ ಹೆಚ್ಚಾಗಬೇಕು’ ಎಂದರು.

‘ಕಳೆದ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಚನ್ನರಾಯಪಟ್ಟಣದ ಅಗ್ನಿಶಾಮಕ ಠಾಣೆಗೆ ಇನ್ನೊಂದು ವಾಹನ ನೀಡುವಂತೆ ಗೃಹಸಚಿವರಿಗೆ ಮನವಿ ಮಾಡಲಾಗಿತ್ತು. ಆದ್ದರಿಂದ ಹೊಸ ವಾಹನ ನೀಡಲಾಗಿದೆ. ಈ ವಾಹನ ನೂತನ ತಂತ್ರಜ್ಞಾನದಿಂದ ಕೂಡಿದೆ. ಈ ವರ್ಷ ತಾಲ್ಲೂಕಿನಲ್ಲಿ 67 ಅಗ್ನಿ ಅವಘಡಗಳು ಸಂಭವಿಸಿವೆ. ಎರಡು ವಾಹನಗಳು ಇರುವುದರಿಂದ ಸೇವೆ ಒದಗಿಸಲು ಅನುಕೂಲವಾಗಿದೆ’ ಎಂದು ಹೇಳಿದರು.

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಕೆ.ಎಸ್. ಪುಟ್ಟಸ್ವಾಮಿ, ಪುರಸಭೆಯ ಮುಖ್ಯಾಧಿಕಾರಿ ಆರ್. ಯತೀಶ್ಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕ ಎಂ.ಆರ್. ಅನಿಲ್ಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-36-1079106750

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.