ಚನ್ನರಾಯಪಟ್ಟಣ: ಪಟ್ಟಣದ ಗಾಯತ್ರಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಏ. 17 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸಿ.ಆರ್. ನಾಗರಾಜ್ ಹೇಳಿದರು.

ಪಟ್ಟಣದ ಗಾಯತ್ರಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ವರೆಗೆ ತಪಾಸಣೆ ನಡೆಯಲಿದೆ. ಮೂಳೆ ಮತ್ತು ಕೀಲು, ಮಧುಮೇಹ, ರಕ್ತದೊತ್ತಡ, ಹೃದಯ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಉಸಿರಾಟದ ತೊಂದರೆ ಬಗ್ಗೆ ತಪಾಸಣೆ ನಡೆಸಲಾಗುವುದು. ಹಾಸನದ ಇಂಡಿಯಾನಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಜ್ಞ ವೈದ್ಯರಾದ ಡಾ.ಚೈತ್ರಾ ವೈ. ಭಟ್, ಡಾ.ನಯೀಮ್ ಸಿದ್ದಿಕ್, ಡಾ.ಎಸ್.ಪಿ. ನಿರೋಪ್ ಅವರ ತಂಡದೊಂದಿಗೆ ಪಾಲ್ಗೊಳ್ಳುವರು ಎಂದು ಹೇಳಿದರು.

ಸಂಘದ ನಿರ್ದೇಶಕರಾದ ಎ.ಎಂ. ಜಯರಾಂ, ಸಿ.ಕೆ. ಲಕ್ಷ್ಮೀನರಸಿಂಹ, ಮೋಹನ್, ಚಂದ್ರಶೇಖರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-36-508489917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.