ಚನ್ನರಾಯಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಎಲ್ಇಡಿ ಟಿ.ವಿಯನ್ನು ಉಚಿತವಾಗಿ ನೀಡಲಾಯಿತು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಿ.ಆರ್.ಯುವರಾಜ್ ಟಿ.ವಿಯನ್ನು ಸ್ವೀಕರಿಸಿದರು.

ಶಾಸಕ ಸಿ.ಎನ್.ಬಾಲಕೃಷ್ಣ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ದೇವರಾಜೇಗೌಡ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸೋಮವಾರ ಇಲ್ಲಿನ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶಾಸಕ ಬಾಲಕೃಷ್ಣ ಮಾತನಾಡಿ, ‘ಮಾಜಿ ಪ್ರಧಾನಿ ದೇವೇಗೌಡರು ಸಾಕಷ್ಟು ಜನಪರ ಯೋಜನೆಗಳನ್ನು ಜಾರಿ ಗೊಳಿಸಿದ್ದಾರೆ. ಆ ಇಳಿವಯಸ್ಸಿನಲ್ಲಿ ರಾಜ್ಯಸಭೆಯಲ್ಲಿ ರೈತರು, ಕಾರ್ಮಿಕರು ಸೇರಿ ಸರ್ವರ ದನಿಯಾಗಿ ಕೆಲಸಮಾಡುತ್ತಿದ್ದಾರೆ’ ಎಂದು ಹೇಳಿದರು.

ಸಾರ್ವಜನಿಕರಿಗೆ ಮತ್ತು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್, ಸಿಹಿ ವಿತರಿಸಲಾಯಿತು. ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್. ವೆಂಕಟೇಶ್, ನಿರ್ದೇಶಕರಾದ ರಮೇಶ್ಕುಂಬಾರಹಳ್ಳಿ, ರವಿಕುಮಾರ್ ನಂಜುಂಡೇಗೌಡ, ಎಂ.ಆರ್. ಅನಿಲ್ಕುಮಾರ್, ನಾಗರಾಜು, ಪುರಸಭೆಯ ಮಾಜಿ ಅದ್ಯಕ್ಷ ಸಿ.ಎಸ್.ಮೋಹನ್, ಮಾಜಿ ಸದಸ್ಯರಾದ ಸಿ.ವೈ. ಸತ್ಯನಾರಾಯಣ್, ರಾಮು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-36-1287392026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.