ಚನ್ನರಾಯಪಟ್ಟಣ: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಕರಾಳ ದಿನ ಆಚರಿಸಿದವು.

ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಗಳ ಸದಸ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಕಾರ್ಮಿಕ ಸಂಘಟನೆಯ ಮುಖಂಡ ಎಚ್.ಎಸ್. ಮಂಜುನಾಥ್ ಮಾತನಾಡಿ, ‘ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು. ಈ ದೇಶದ ಪ್ರಗತಿಗಾಗಿ ಸಮಾಜವಾದಿ ಆರ್ಥಿಕ ನೀತಿಯನ್ನು ಜಾರಿಗೆ ತರಬೇಕು. ಆದರೆ ಬಂಡವಾಳಗಾರರ ಪರ ಕೆಲಸ ಮಾಡಲು ಪ್ರಧಾನಿ ನರೇಂದ್ರ ಮೋದಿ ಹೊರಟಿದ್ದಾರೆ. ಕಾರ್ಮಿಕರಿಗೆ ವಿರೋಧಿಯಾಗಿರುವ ಕರಾಳ ಸಂಹಿತೆಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಒತ್ತಾಯಿಸಿದರು.

‘ಕಾರ್ಮಿಕ ಸಂಹಿತೆ ಜಾರಿಯಾದಲ್ಲಿ ಕಾರ್ಮಿಕ ಸಂಘಟನೆಗಳಿಗೆ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಕಾರ್ಮಿಕ ಸಂಘಗಳ ನೋಂದಣಿ ಕಷ್ಟಕರವಾಗುತ್ತದೆ. ಅಲ್ಲದೇ ರದ್ದು ಮಾಡುವುದು ಸುಲಭವಾಗಲಿದೆ. ಮುಷ್ಕರದ ಹಕ್ಕುಗಳನ್ನು ಮೊಟಕುಗೊಳಿಸುವುದು. ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತದೆ’ ಎಂದು ದೂರಿದರು.

ಮುಖಂಡ ಚಂದ್ರಹಾಸ್ ಮಾತನಾಡಿ, ‘ನಾಲ್ಕು ಕಾರ್ಮಿಕ ಸಂಹಿತೆಗಳು ಜಾರಿಗೆ ಬರುತ್ತಿರುವುದು ದುರದೃಷ್ಟಕರ. ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಲಾಗುತ್ತದೆ. ಇದನ್ನು ತಡೆಯಲು ನಾಲ್ಕು ವರ್ಷದಿಂದ ಹೋರಾಟ ಮಾಡಿದರು ಪ್ರಯೋಜನವಿಲ್ಲದಂತಾಗಿದೆ. ಹೆಚ್ಚು ಅವಧಿಗೆ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತದೆ. ಕಾರ್ಮಿಕರಿಗೆ ರಕ್ಷಣೆ ಇಲ್ಲ. ರಾಜ್ಯಸರ್ಕಾರ ಸಹ ಕಾರ್ಮಿಕರ ಹಿತ ಕಾಪಾಡುತ್ತಿಲ್ಲ. ಕೂಡಲೇ ಕಾರ್ಮಿಕ ಸಂಹಿತೆಯನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಕಾರ್ಮಿಕ ಮುಖಂಡರಾದ ವಾಸುದೇವ್ ಕಲ್ಕೆರೆ, ತೇಜಸ್, ರಮೇಶ್ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-36-222322949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.