ಚನ್ನರಾಯಪಟ್ಟಣ: ಗೃಹಬಳಕೆ ಅನಿಲದ ವಿತರಣೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಅಡುಗೆ ಅನಿಲ ವಿತರಕರ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಈ ನಿಟ್ಟಿನಲ್ಲಿ ಯಾರೂ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು. ಜನರು ವದಂತಿಗಳಿಗೆ ಕಿವಿಗೊಡಬಾರದು. ಅವಸರ ಪಡದೆ ಸಹಕಾರ ನೀಡಬೇಕು. ತಾಲ್ಲೂಕಿನಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಲ್ಲ ಎಂದರು.

ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವುದು ಅತ್ಯಗತ್ಯ. ಎಲ್ಪಿಜಿವಿತರಕರು ದಾಸ್ತಾನು ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಇಕೆವೈಸಿ ಆಗದೇ ಇರುವ ಗ್ರಾಹಕರಿಗೆ ತಕ್ಷಣವೇ ಇಕೆವೈಸಿ ಮಾಡಿಸಿಕೊಂಡು ಸಿಲಿಂಡರ್ ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು.

ಸಿಲಿಂಡರ್ ಪೂರೈಕೆಯಲ್ಲಿ ಕೃತಕಅಭಾವ ಸೃಷ್ಟಿಸಬಾರದು. ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುವಂತಿಲ್ಲ. ಗೃಹ ಬಳಕೆ ಸಿಲಿಂಡರ್ಗಳನ್ನು ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ವಿತರಿಸಬಾರದು. ವಿತರಣೆ, ದಾಸ್ತಾನುಗಳ ವಿವರಗಳನ್ನು ಪ್ರತಿದಿನ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.

ಸಿಲಿಂಡರ್ ವಿತರಣೆಯಲ್ಲಿ ಆಸ್ಪತ್ರೆ, ಶಾಲಾ-ಕಾಲೇಜು, ಅಂಗನವಾಡಿ, ವಿದ್ಯಾರ್ಥಿನಿಲಯ, ಇಂದಿರಾ ಕ್ಯಾಂಟೀನ್ಗಳಿಗೆ ಆದ್ಯತೆ ನೀಡಬೇಕು. ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಸಂಬಂಧ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿದರು. ಡಿವೈಎಸ್ಪಿ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಶಿರಸ್ತೆದಾರ್ ಹೇಮಂತ್ ಕುಮಾರ್ ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-36-1639092063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.