ಚನ್ನರಾಯಪಟ್ಟಣ: ವೈಜ್ಞಾನಿಕ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಿಐಟಿಯು ತಾಲ್ಲೂಕು ಸಮಿತಿಯಿಂದ ಬುಧವಾರ ತಾಲ್ಲೂಕು ಕಚೇರಿ ಎದುರು ಸಾರ್ವಜನಿಕರಿಂದ ಸಾಮೂಹಿಕ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ಮಾತನಾಡಿ, ರಾಜ್ಯ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನವನ್ನು 7 ವರ್ಷ ಕಳೆದರೂ ಪರಿಷ್ಕರಣೆ ಮಾಡಿಲ್ಲ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ವೇತನ ಪರಿಷ್ಕರಣೆ ಮಾಡಿತ್ತು. ಇದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದ್ದರೂ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಅನುಸೂಚಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಬೇಕು. ಕಾರ್ಮಿಕರ ಕುಟುಂಬಗಳಿಗೆ ಒಂದು ತಿಂಗಳಿಗೆ ತಗಲುವ ಆಹಾರ, ಮನೆ ಬಾಡಿಗೆ, ಶಿಕ್ಷಣ, ಆರೋಗ್ಯ, ಇಂಧನ, ಮನರಂಜನೆ ಇತ್ಯಾದಿ ವೆಚ್ಚಗಳಿಗೆ ಅನುಗುಣವಾಗಿ ಪ್ರಸ್ತುತ ಮಾರುಕಟ್ಟೆ ಬೆಲೆ ಆಧರಿಸಿ ವೇತನ ನಿಗದಿಪಡಿಸಬೇಕು ಎಂದರು.

2025ರ ಏಪ್ರಿಲ್ 11ರಂದು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತಾದರೂ, ಅದು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಬಂಡವಾಳಿಗರ ಮತ್ತು ಮಾಲೀಕರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದೆ ಕೋಟ್ಯಂತರ ಕಾರ್ಮಿಕರಿಗೆ ವಂಚಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಜಾರಿಗೆ ತಂದಿರುವ 4 ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿವೆ ಎಂದು ಧರ್ಮೇಶ್ ಎಚ್ಚರಿಸಿದರು. ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಎಲ್ಲ ಕಾಯಂ ಅಲ್ಲದ ಕಾರ್ಮಿಕರನ್ನು ಕಾಯಂಗೊಳಿಸಬೇಕು ಮತ್ತು ಸೊಸೈಟಿ ಮಾದರಿ ನೇಮಕಾತಿಯನ್ನು ಕೈಬಿಡಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.

ಗ್ರಾ.ಪಂ. ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಹೊನ್ನೇಗೌಡ, ಕೆ.ಪಿ.ಆರ್.ಎಸ್. ತಾಲ್ಲೂಕು ಘಟಕದ ಅಧ್ಯಕ್ಷ ತೇಜಸ್ ಗೌಡ, ಗ್ರಾ.ಪಂ. ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್. ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೇಗೌಡ, ಖಜಾಂಚಿ ಮಂಜುನಾಥ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-36-1167462390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.