ಚನ್ನರಾಯಪಟ್ಟಣ: ಕ್ರೀಡಾಪಟುಗಳ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸಲಾಗಿದೆ. ಲಭ್ಯ ಇರುವ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೆಶನಾಲಯ ಪುರಸಭೆಯ ಅನುದಾನದಲ್ಲಿ ನಿರ್ಮಿಸಿರುವ ಹೈಟೆಕ್ ಶೌಚಾಲಯವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಶುಚಿತ್ವ ಕಾಪಾಡಬೇಕು. ₹66 ಲಕ್ಷ ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಶೌಚಾಲಯ ನಿರ್ಮಿಸಲಾಗಿದೆ. ನಿತ್ಯ ನೂರಾರು ಕ್ರೀಡಾಪಟುಗಳು ಅಭ್ಯಾಸದಲ್ಲಿ ತೊಡಗುತ್ತಾರೆ. ವ್ಯಾಯಾಮ ಮಾಡುವುದು, ವಾಯುವಿಹಾರ ಮಾಡಲು ಜನತೆ ಆಗಮಿಸುವುದರಿಂದ ಶೌಚಾಲಯದ ಅಗತ್ಯ ಇತ್ತು. ಈ ನಿಟ್ಟಿನಲ್ಲಿ ಅನುದಾನ ಕ್ರೋಡೀಕರಿಸಿ ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ. ಅದೇರೀತಿ ಅಂಬಿಕಾನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ₹33 ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ ಎಂದರು.

ಪುರಸಭೆ ವತಿಯಿಂದ ಶೌಚಾಲಯದ ಸ್ವಚ್ಛತೆ ಕೈಗೊಳ್ಳಲಾಗುವುದು. ಶೌಚಾಲಯದ ಮುಂಭಾಗ ಇಂಟರ್ಲಾಕ್ ಅಳವಡಿಸಲಾಗುವುದು. ಮಳೆನೀರು ಬೀಳದ ರೀತಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಪುರಸಭೆಯ ಮುಖ್ಯಾಧಿಕಾರಿ ಆರ್. ಯತೀಶ್ಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕ ಎಂ.ಆರ್. ಅನಿಲ್ಕುಮಾರ್, ಪುರಸಭೆಯ ಮಾಜಿ ಸದಸ್ಯ ಮೋಹನ್, ಪರಿಸರ ಎಂಜಿನಿಯರ್ ಬಿ.ಎ.ಕಾವ್ಯಶ್ರೀ, ಕಿರಿಯ ಎಂಜಿನಿಯರ್ಗಳಾದ ಬಸವರಾಜು, ಗಿರೀಶ್, ಹಿರಿಯ ಆರೋಗ್ಯ ನಿರೀಕ್ಷಕ ಮೂರ್ತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-615034906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.