ಹಾಸನ: ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹಾಸನದ ಎಂಎಂಎಂ ಆಸ್ಪತ್ರೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಉಮೇಶ್ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 14ರಂದು ರಾತ್ರಿ 10.30ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಬಿಳೇಕಲ್ಲು ಗ್ರಾಮದ ಕುರುವಂಗಿ ರಸ್ತೆಯಲ್ಲಿ ಒಂದೇ ಕುಟುಂಬದ ಎಂಟು ಜನರ ಮೇಲೆ ಕಾರು ಹರಿದು 6 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿತ್ತು. ಉಳಿದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಬಾಲಕಿಯರಾದ ಶ್ರುತಿ, ತೃಪ್ತಿ, ನಿಶ್ಚಲ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಚೇತನ್, ತಿಮ್ಮರಾಜು, ಉಷಾ, ನಾಗರಾಜು ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದೆ’ ಎಂದರು.

‘ನಮ್ಮ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತದೆ ಎಂದು ದಿನೇಶ್ ಎಂಬುವವರು ಸಲಹೆ ನೀಡಿದ್ದರಿಂದ ಗಾಯಾಳುಗಳು ಇಲ್ಲಿಗೆ ಬಂದರು.ಅಪಘಾತ ಸೇರಿದಂತೆ ಹಲವು ಕಾರಣಗಳಿಗೆ ಬೆಂಗಳೂರು ಹಾಗೂ ಇತರ ಜಿಲ್ಲೆಗಳ ಆಸ್ಪತ್ರೆಗಳಿಗೆ ತೆರಳುವವರು ಹಾಸನದಲ್ಲಿಯೇ ಉತ್ತಮ ಚಿಕಿತ್ಸೆ ಪಡೆಯಬಹುದು. ನಮ್ಮ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯ ಹಾಗೂ ಗುಣಮಟ್ಟದ ಚಿಕಿತ್ಸೆ ಲಭ್ಯವಿದೆ’ ಎಂದು ಡಾ. ಉಮೇಶ್ ತಿಳಿಸಿದರು.

ಡಾ. ಮನೋಜ್ ಕುಮಾರ್, ಬಿಳಿಗಿರಿ, ಗಂಗಾಧರ್ ಬಹುಜನ್, ಚಿಕಿತ್ಸೆ ಪಡೆದ ಉಷಾ, ನಿಶ್ಚಲ, ಚೇತನ್, ತೃಪ್ತಿ ಹಾಗೂ ಸಂಬಂಧಿ ಕಮಲಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-1512032349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.