ಹೆತ್ತೂರು: ಯಸಳೂರು ಸಮೀಪದ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿರುವ ಅರ್ಜುನನ ಸಮಾಧಿ ಆವರಣದಲ್ಲಿ ನಿರ್ಮಾಣವಾಗಿರುವ ಅರ್ಜುನನ ಪ್ರತಿಮೆ ಉದ್ಘಾಟನೆ ಮೇ 6 ರಂದು ನಡೆಯಲಿದ್ದು, ಶಾಸಕ ಸಿಮೆಂಟ್ ಮಂಜು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ಮಾಡಿದರು.

ಈ ಸಂದರ್ಭ ಮಾತನಾಡಿದ ಸಿಮೆಂಟ್ ಮಂಜು, ಈಗಾಗಲೇ ಅರ್ಜುನನ ಪ್ರತಿಮೆ ಉದ್ಘಾಟನೆ ಆಗುವುದು ವಿಳಂಬವಾಗಿದೆ. ಫೈಬರ್ ಪ್ರತಿಮೆ ಮಾಡಿರುವುದು ಬೇಸರವಾಗಿದೆ. ಅರ್ಜುನನಿಗೆ ಕಂಚಿನ ಪ್ರತಿಮೆ ಮಾಡಿದ್ದರೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತಿತ್ತು ಎಂದರು.

ಸಮಾಧಿಗೆ ಹೋಗಲು ಡಾಂಬರ್ ರಸ್ತೆ ಇಲ್ಲ, ತಾತ್ಕಾಲಿಕವಾಗಿ ಇಲ್ಲಿ ಶೌಚಾಲಯದ ವ್ಯವಸ್ಥೆ ಮಾಡಲಾಗಿದ್ದು, ಸರಿಯಾದ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿ ನಿರ್ಮಾಣ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಅರ್ಜುನನ ಕುರಿತು ಮಾಹಿತಿಯನ್ನು ಕಂಚಿನ ಫಲಕದಲ್ಲಿ ಹಾಕಬೇಕು. ಅರ್ಜುನನ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರದೇಶವು ಮುಂದಿನ ದಿನಗಳಲ್ಲಿ ಪ್ರವಾಸಿ ಸ್ಥಳವಾಗಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಅರಣ್ಯ ಸಚಿವರಲ್ಲಿ ಮನವಿ ಮಾಡುತ್ತೇನೆ. ತಾಲ್ಲೂಕಿನಲ್ಲಿ ಉಂಟಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಂದಾಗಬೇಕು. ಅರ್ಜುನನ ಸಮಾಧಿ ಹೋರಾಟದಲ್ಲಿ 19 ಜನರ ಮೇಲೆ ದಾಖಲಾಗಿರುವ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕೆಂದು ಮನವಿ ಮಾಡುತ್ತೇನೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಸಕಲೇಶಪುರ ಎಸಿಎಫ್ ಮಧುಸೂದನ್, ಹಾಸನ ಎಸಿಎಫ್ ಮೋಹನ್, ಯಸಳೂರು ವಲಯ ಅರಣ್ಯ ಅಧಿಕಾರಿ ಸಿದ್ದರಾಮಯ್ಯ ಹಿರೇಮಠ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-36-336238604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.