ಬೇಲೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ನೀಡುವ ವಾಹನವನ್ನು ಶಾಸಕ ಎಚ್.ಕೆ.ಸುರೇಶ್ ಫಲಾನುಭವಿಗೆ ಹಸ್ತಾಂತರ ಮಾಡಿದರು.

ಇಲ್ಲಿನ ಶಾಸಕರ ಕಚೇರಿಯಲ್ಲಿ ಸೋಮವಾರ ದೊಡ್ಡಬ್ಯಾಡಿಗೆರೆಯ ಕೀರ್ತನಾ ಅವರಿಗೆ ವಾಹನದ ಕೀ ಹಸ್ತಾಂತರಿಸಿ ಅವರು ಮಾತನಾಡಿ, ‘ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಹಿರಿಯರವರೆಗೆ ಜನರನ್ನು ಗುರುತಿಸಿ, ಸ್ವಾವಲಂಬಿ ಜೀವನ ನಡೆಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ’ ಎಂದು ತಿಳಿಸಿದರು.

‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸಂವಿಧಾನ ರೂಪಿಸಿದ್ದರು. ಅದಕ್ಕೆ ಪೂರಕವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸ್ವಂತ ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಲು ವಾಹನ ಸೌಲಭ್ಯ ನೀಡಲಾಗುತ್ತಿದೆ’ ಎಂದು ಹೇಳಿದರು.

‘2025-26ನೇ ಸಾಲಿನಲ್ಲಿ ಒಟ್ಟು ಎಂಟು ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಲಾಗುತ್ತಿದ್ದು, ಪ್ರತಿಯೊಂದು ವಾಹನಕ್ಕೂ ಸುಮಾರು ₹4 ಲಕ್ಷ ಸಹಾಯಧನ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಬಿಜೆಪಿ ಮುಖಂಡ ಪರ್ವತಯ್ಯ, ಸಿ.ಎಸ್. ಪ್ರಕಾಶ್, ಮಂಜುನಾಥ್ ಹಾಗೂ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-1222892801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.