ಅರಸೀಕೆರೆ: ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅರಸೀಕೆರೆಯಲ್ಲಿ ಜೂನ್ 2ರಂದು ಚಾಲನೆ ನೀಡುವರು. ಮೊದಲು ಮೇ31ಕ್ಕೆ ಈ ಕಾರ್ಯಕ್ರಮ ನಿಗದಿಯಾಗಿತ್ತು, ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸಿದ ಸುಸಂದರ್ಭ ಹಾಗೂ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆ ಮಾಡಿರುವ ಜನತೆಯ ಕಲ್ಯಾಣದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ನೂತನ ಬಸ್ ನಿಲ್ದಾಣ, ಫುಡ್ ಕೋರ್ಟ್, ಒಳಾಂಗಣ ಕ್ರೀಡಾಂಗಣ, ತಾಲ್ಲೂಕು ಪತ್ರಕರ್ತರ ಭವನ, ಸೌರ ಘಟಕ ಉತ್ಪಾದನೆ ಸೇರಿದಂತೆ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಧಿಕಾರವಧಿಯಲ್ಲಿ ಶಾಶ್ವತ ಕೆಲಸಗಳು ಮಾಡಿದಾಗ ಮಾತ್ರ ಜನರ ಮನಸ್ಸಿನಲ್ಲಿಯೂ ಉಳಿಯಲು ಸಾಧ್ಯವಾಗಿರುತ್ತದೆ. ತಾಲ್ಲೂಕಿನ ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಪ್ರಸಕ್ತ ವರ್ಷದಿಂದಲೇ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕೋರ್ಸ್ಗಳು ಆರಂಭವಾಗಲಿದ್ದು, ಸೂಕ್ತ ವಸತಿ ನಿಲಯಗಳ ಸೌಲಭ್ಯವಿದ್ದು ಪೋಷಕರು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.