ಇತ್ತೀಚೆಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸಭೆ ನಡೆಸಿ, ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಮತ್ತು ದಾಸ್ತಾನು ತಡೆಯುವಂತೆ ಸೂಚನೆ ನೀಡಿದ್ದರು. ಅದರಂತೆ ಶುಕ್ರವಾರ ದಾಳಿ ನಡೆಸಿ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ. ಇಂತಹ ಕಾರ್ಯಾಚರಣೆ ಮುಂದುವರಿಯಲಿದ್ದು, ಪ್ಲಾಸ್ಟಿಕ್ ದಾಸ್ತಾನು ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.