ಹಾಸನ: ಜಿಲ್ಲೆಯಲ್ಲಿ ತೆಂಗಿಗೆ ಮೂರಕ್ಕೂ ಹೆಚ್ಚು ಕಾಯಿಲೆಗಳು ಬಾಧಿಸುತ್ತಿದ್ದು, ಇದನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಂಡಿವೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ರಥಕ್ಕೆ ಚಾಲನೆ ನೀಡಲಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ತೆಂಗು ಬೆಳೆಗೆ ತಗಲಿರುವ ರೋಗ ಹತೋಟಿ ಕ್ರಮ ಹಾಗೂ ಅಗತ್ಯ ಮಾಹಿತಿ ಒಳಗೊಂಡ ತೆಂಗು ಕಾಯಕಲ್ಪ ರಥಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆಯಿಂದ ತೆಂಗು ಬೆಳೆಗಾರರಿಗೆ ಜಾಗೃತಿ ಮೂಡಿಸುವ ರಥಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೆಂಗನ್ನು ಹೆಚ್ಚು ಬೆಳೆಯಲಾಗುತ್ತದೆ. 15 ದಿನಗಳ ಹಿಂದೆ ಕೇಂದ್ರ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ತೆಂಗು ಬೆಳೆಗಾರರ ಸಭೆ ನಡೆಸಲಾಯಿತು. ಜಿಲ್ಲೆಯ ತೆಂಗು ಬೆಳೆಗಾರರ ಮನವಿಗೆ ಸ್ಪಂದಿಸಿ, ಜಾಗೃತಿ ಮೂಡಿಸುವ ರಥಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮುಂದಿನ ಕೆಲದಿನಗಳಲ್ಲಿ ಕೇಂದ್ರ ಸಚಿವ ಶಿವರಾಜ್ಸಿಂಗ್ ಚೌಹಾಣ್ ಕಾಸರಗೋಡಿಗೆ ಬರಲಿದ್ದು, ಈ ವೇಳೆಯೂ ಅವರ ಗಮನಕ್ಕೆ ತರಲಾಗುವುದು. ಲೋಕಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿಯೂ ತೆಂಗು ಬೆಳೆಗಾರರ ಸಮಸ್ಯೆ ಕುರಿತು ಮನವರಿಕೆ ಮಾಡಿದ್ದೇನೆ ಎಂದರು.

ಸರ್ಕಾರ ಜಾಗೃತಿ ರಥದ ಮೂಲಕ ಅರಿವು ಮೂಡಿಸುತ್ತಿದ್ದು, ಅಗತ್ಯ ಔಷಧಿ ಹಾಗೂ ಇತರೆ ಸೌಲಭ್ಯ ಒದಗಿಸಲಾಗುತ್ತಿದೆ. ತೆಂಗು ಬೆಳೆಗಾರರು ಇದರ ಸದುಪಯೋಗ ಪಡೆಯಬೇಕು. ಪ್ರಾಥಮಿಕ ಹಂತದಲ್ಲಿಯೇ ರೋಗ ಹತೋಟಿ ಕ್ರಮಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ರೋಗ ಹತೋಟಿಗೆ ಬೇಕಾದ ಔಷಧಿ ಹಾಗೂ ಬೇವಿನಹಿಂಡಿ ಸೇರಿದಂತೆ ಇತರೆ ಸೌಲಭ್ಯವನ್ನು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಒದಗಿಸಲಾಗಿದ್ದು, ತೋಟಗಾರಿಕೆ ಇಲಾಖೆಯಿಂದಲೂ ಅಗತ್ಯ ಮಾಹಿತಿ ನೀಡಲಾಗುವುದು ಎಂದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಡ ಸೋರುವ ರೋಗ ಮತ್ತು ಅಣಬೆ ರೋಗ ಹಾಗೂ ಕಪ್ಪು ತಲೆ ಹುಳು, ರುಗೋಸ್ ಬಿಳಿನೋಣ ಕೀಟಗಳು ಹೆಚ್ಚಾಗಿ ಕಂಡು ಬಂದಿದೆ. ಇದಕ್ಕೆ ಇಲಾಖೆಯಿಂದ ಔಷಧಿ ವಿತರಿಸಲಾಗುತ್ತಿದೆ. ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದರು.

ತೆಂಗು ಬೆಳೆಯನ್ನು ಹೆಚ್ಚಾಗಿ ಬಾಧಿಸುವ ಕಪ್ಪು ತಲೆ ಹುಳು ಹಾಗೂ ರೋಗಗಳು ನಿಯಂತ್ರಣಕ್ಕೆ ಪರೋಪಜೀವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಿ, ಜಿಲ್ಲೆಯ ರೈತರಿಗೆ ಉಚಿತವಾಗಿ ವಿತರಿಸಲಾಗುವುದು. ಇದಕ್ಕಾಗಿ ಅರಸೀಕೆರೆ ಮತ್ತು ಹೊಳೆನರಸೀಪುರ ಪ್ರಯೋಗಾಲಯಗಳ ಉನ್ನತೀಕರಣಕ್ಕೆ ₹ 3 ಕೋಟಿ ಪ್ರಸ್ತಾವ ಕಳಿಸಲಾಗಿದೆ ಎಂದು ತಿಳಿಸಿದರು.

ತೆಂಗಿನ ಬೆಳೆಯಲ್ಲಿ ಸಮಗ್ರ ರೋಗ ಕೀಟ ನಿಯಂತ್ರಣ ಹಾಗೂ ಪೋಷಕಾಂಷ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಅವಶ್ಯಕವಿರುವ ಪರಿಕರಗಳನ್ನು ರೈತರಿಗೆ ಒದಗಿಸಲು ₹ 197 ಕೋಟಿ ಪ್ರಸ್ತಾವ ಹಾಗೂ ತೆಂಗು ಬೆಳೆಗೆ ಸಮರ್ಪಕವಾಗಿ ನೀರನ್ನು ಪೂರೈಸಲು ಸಬ್ ಸರ್ಫೇಸ್ ಇರಿಗೇಶನ್ ಸಿಸ್ಟಂ ಅಳವಡಿಸಲು ಸಹಾಯಧನ ವಿತರಣೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಂಜುನಾಥ್, ಸಹಾಯಕ ತೋಟಗಾರಿಕಾ ನಿರ್ದೇಶಕ ತೇಜ್ಕುಮಾರ್, ರೈತರು, ತೆಂಗು ಬೆಳೆಗಾರರು, ಇತರೆ ಅಧಿಕಾರಿಗಳು ಹಾಜರಿದ್ದರು.

1.18 ಲಕ್ಷ ಹೆಕ್ಟೇರ್ನಲ್ಲಿ ತೆಂಗು

ರಾಜ್ಯದಲ್ಲಿಯೇ ಹಾಸನ ಜಿಲ್ಲೆ ತೆಂಗು ಬೆಳೆಯುವಲ್ಲಿ ಎರಡನೇ ಸ್ಥಾನದಲ್ಲಿದೆ. ಸುಮಾರು 1.18 ಲಕ್ಷ ಹೆಕ್ಟೇರ್ನಲ್ಲಿ ತೆಂಗು ಬೆಳೆಯಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಣಾಧಿಕಾರಿ ಬಿ.ಆರ್.ಪೂರ್ಣಿಮಾ ಹೇಳಿದರು. ಇದೀಗ ತೆಂಗು ಬೆಳೆಗೆ ಹಲವಾರು ರೋಗಬಾಧೆ ಕಾಡುತ್ತಿದೆ. ಇದರಿಂದ ತೆಂಗಿನ ಇಳುವರಿ ಕಡಿಮೆಯಾಗಿದ್ದು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಾಯಿಲೆ ತಡೆಯುವುದು ಔಷಧೋಪಚಾರಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಲು ಜಾಗೃತಿ ರಥಕ್ಕೆ ಚಾಲನೆ ನೀಡಲಾಗಿದೆ. ಬೆಳೆಗಾರರು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.