ಸಕಲೇಶಪುರ: ಮಲೆನಾಡು ಭಾಗದಲ್ಲಿ ಒಂದೂವರೆ ತಿಂಗಳಿಂದ ಧಾರಾಕಾರವಾಗಿ ಮಳೆ ಸುರಿದು ಕಾಫಿ, ಕಾಳುಮೆಣಸು ಬೆಳೆಗಳು ಕೊಳೆ ರೋಗಕ್ಕೆ ತುತ್ತಾಗಿದ್ದರೂ ರಾಜ್ಯ ಸರ್ಕಾರ ಕಾಫಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸದೇ ನಿದ್ದೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದರು.

ತಾಲ್ಲೂಕಿನ ಕ್ಯಾನಹಳ್ಳಿಯಲ್ಲಿ ಕಾಫಿ ಬೆಳೆ ಹಾನಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇ 40ರಿಂದ ಶೇ 50ರಷ್ಟು ಬೆಳೆ ನಾಶವಾಗಿರುವುದನ್ನು ನಾನೇ ತೋಟಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದೇನೆ’ ಎಂದರು.

‘ಹಾಸನ ಜಿಲ್ಲೆಯೊಂದರಲ್ಲೆ ಕೋಟಿ ಮೌಲ್ಯದ ಬೆಳೆ ನಾಶ ಆಗಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಾಳುಮೆಣಸು ಹಾಗೂ ಅಡಿಕೆ ಫಸಲು ಸಹ ಬಳ್ಳಿ ಹಾಗೂ ಗಿಡದಿಂದ ಉದುರುತ್ತಿವೆ. ಕೆಲವು ತೋಟಗಳಲ್ಲಿ ಕಾಳು ಮೆಣಸು ಬಳ್ಳಿಗಳೇ ಒಣಗುತ್ತಿರುವುದಾಗಿ ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ. ಅತಿವೃಷ್ಟಿಯಿಂದ ಬೆಳೆಗಾರರು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗದಲ್ಲಿ ಮಾವಿಗೆ ಸಮಸ್ಯೆಯಾದಾಗ ಕೇಂದ್ರ ಸರ್ಕಾರ ಮೊದಲಿಗೆ ಪರಿಹಾರ ಘೋಷಣೆ ಮಾಡಿತು. ನಂತರ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು. ಇಲ್ಲೂ ಆ ರೀತಿಯಾಗಬಾರದು ಎಂದರು.

‘ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಸನಕ್ಕೆ ಭೇಟಿ ನೀಡಲು ಆಸಕ್ತಿ ತೋರುತ್ತಿಲ್ಲ. ಜನರ ಪ್ರಶ್ನೆಗಳಿಗೆ ಉತ್ತರ ಕೊಡಲಾರದೇ ಅಧಿಕಾರಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ. ಆದರೂ ಸರ್ಕಾರ ನಿದ್ದೆ ಮಾಡುತ್ತಿದೆ’ ಎಂದರು.

ಕಾಫಿ ಮಂಡಳಿ ಜೊತೆ ನಾನು ಮಾತನಾಡುತ್ತೇನೆ. ರಾಜ್ಯ ಸರ್ಕಾರ ಇಲ್ಲಿ ಆಗಿರುವ ನಷ್ಟವನ್ನು ಇನ್ನೂ ಲೆಕ್ಕ ಹಾಕಿಲ್ಲ. ಬೇಜವಾಬ್ದಾರಿ ಸರ್ಕಾರವಾಗಿದ್ದು, ನಾನು ಎಚ್ಚರಿಸಲು ಬಂದಿದ್ದೇನೆ. ನಾನು ಕಂದಾಯ ಸಚಿವನಾಗಿದ್ದಾಗ ಕಾಫಿ ಬೆಳೆಗಾರರ ಒತ್ತುವರಿ ಭೂಮಿಯನ್ನು ಗುತ್ತಿಗೆಗೆ ಕೊಡುವ ಕಾನೂನನ್ನು ಒಂದೇ ಒಂದು ತಿಂಗಳಲ್ಲಿ ರಚಿಸಿದ್ದೆ. ಆದರೆ ಸರ್ಕಾರ ಅದಕ್ಕೆ ಇನ್ನೂ ನಿಯಮಗಳನ್ನು ರೂಪಿಸಲು ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.

ಕೂಡಲೆ ಸರ್ಕಾರ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕಾಫಿ ಬೆಳೆಗಾರರಿಗೆ ಒತ್ತುವರಿ ಭೂಮಿ ಗುತ್ತಿಗೆ ಕೊಡುವುದರ ಜೊತೆಗೆ, ಅದರ ಮೇಲೆ ಬ್ಯಾಂಕ್ ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು. ಈ ಸರ್ಕಾರ ಮಾಡದಿದ್ದಲ್ಲಿ ನಮ್ಮ ಸರ್ಕಾರ ಬಂದು ಈ ಕೆಲಸ ಮಾಡುತ್ತದೆ. ರೈತರಿಗೆ ಪರಿಹಾರ ಮತ್ತು ನ್ಯಾಯ ಸಿಗುವವರೆಗೆ ನಿರಂತರವಾಗಿ ಹೋರಾಟ ಮಾಡುತ್ತೇವೆ. ಎಂದರು.

ಶಾಸಕರಾದ ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ತಾಲ್ಲೂಕು ಘಟಕದ ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಮಾಜಿ ಅಧ್ಯಕ್ಷ ಕ್ಯಾನಹಳ್ಳಿ ಸುಬ್ರಹ್ಮಣ್ಯ, ಕಾಫಿ ಬೆಳೆಗಾರರ ಸಂಘದ ಮುಖಂಡ ಕೌಡಳ್ಳಿ ಲೋಹಿತ್ ಇದ್ದರು.

ನಿದ್ದೆ ಮಾಡುತ್ತಿರುವ ರಾಜ್ಯ ಸರ್ಕಾರ

ಹೆತ್ತೂರು: ರಾಜ್ಯ ಸರ್ಕಾರ ಕಾಫಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸದೇ ನಿದ್ದೆ ಮಾಡುತ್ತಿದೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು. ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಸೋಮವಾರ ಕಾಫಿ ಕಾಳು ಮೆಣಸು ಬೆಳೆಗೆ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹೆಚ್ಚು ಮಳೆ ಆಗಿರುವುದರಿಂದ ಅತಿಯಾದ ತೇವಾಂಶ ಉಂಟಾಗಿ ಕಾಫಿ ಬೀಜ ಮತ್ತು ಎಲೆಗಳು ಕೊಳೆಯುತ್ತಿವೆ. ದೇಶದ ಆದಾಯ ಹಾಗೂ ರೈತರ ಆದಾಯಕ್ಕೆ ನಷ್ಟ ಉಂಟಾಗಿದೆ. ಅತಿಯಾದ ಮಳೆಯಿಂದ ಕಾಫಿ ಮತ್ತು ಮೆಣಸು ಕಪ್ಪಾಗುತ್ತಿದ್ದು. ಅಡಿಕೆ ಉದರುತ್ತಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ಸಮಸ್ಯೆಗೆ ಪರಿಹಾರ ಹುಡುಕುವುದಿರಲಿ ಕನಿಷ್ಠ ಅಧಿಕಾರಿಗಳು ನಷ್ಟದ ಪ್ರಮಾಣವನ್ನು ಸಹ ಅಂದಾಜಿಸಿಲ್ಲ. ರಾಜ್ಯ ಸರ್ಕಾರ ಇನ್ನೂ ನಿದ್ರೆಯಲ್ಲಿದೆ. ಹೀಗಾಗಿ ನಾನೇ ಖುದ್ದು ಪರಿಶೀಲನೆಗೆ ಬಂದಿದ್ದೇನೆ. ಪರಿಹಾರಕ್ಕಾಗಿ ಬರೀ ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು ಮೊದಲು ಇಲ್ಲಿಂದ ಪರಿಹಾರ ಘೋಷಣೆ ಮಾಡಲಿ. ನಂತರ ನಾನು ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸುತ್ತೇನೆ ಎಂದು ಹೇಳಿದರು. ಶಾಸಕ ಸಿಮೆಂಟ್ ಮಂಜು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ತಾಲ್ಲೂಕು ಘಟಕದ ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ ಕರ್ನಾಟಕ ಬೆಳೆಗಾರರ ಸಂಘದ ಅಧ್ಯಕ್ಷ ಹಣಸೆ ಶಿವಣ್ಣ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ದೇವರಾಜ್ ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರ ಸಂಘದ ಅಧ್ಯಕ್ಷ ದರ್ಶನ್ ಮರ್ಜನಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.