ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಕಂದಾಯ ಸಚಿವ ಆರ್.ಅಶೋಕ್

Last Updated 24 ಜುಲೈ 2021, 14:09 IST
ಅಕ್ಷರ ಗಾತ್ರ

ಹಾಸನ: ರಾಜ್ಯದಲ್ಲಿ ಮಳೆ ಹೆಚ್ಚಾಗಿ ಪ್ರವಾಹ, ಭೂ ಕುಸಿತ ಉಂಟಾಗುತ್ತಿದೆ. ಮೊದಲು‌ ಜನರನ್ನು ಉಳಿಸುವ ಕೆಲಸ ಮಾಡೋಣ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸಕಲೇಶಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಕ್ಕೆ ಯಡಿಯೂರಪ್ಪ ಬದ್ಧ ಎಂದಿದ್ದಾರೆ.ಮೋದಿ, ಅಮಿತ್ ಷಾ, ನಡ್ಡಾ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.

ಬಿಎಸ್‌ವೈ ಅವರನ್ನೇ ಸಿ.ಎಂ ಆಗಿ ಮುಂದುವರಿಸಬೇಕೆಂಬ ಸ್ವಾಮೀಜಿಗಳ ಹೇಳಿಕೆಗೆಪತ್ರಿಕ್ರಿಯಿಸಿದ ಅವರು, ‘ಸ್ವಾಮೀಜಿಗಳ ಬಗ್ಗೆ ಗೌರವ ಇದ್ದು, ಅವರ ಸಲಹೆಗೆ ಕೃತಜ್ಞತೆಸಲ್ಲಿಸುತ್ತೇನೆ. ಕೇಂದ್ರದಲ್ಲಿ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುವುದೋ ಅದರಂತೆನಡೆಯುತ್ತೇವೆ. ಯಾವ ಶಾಸಕರು ಸಮರ್ಥರಿದ್ದಾರೆ ಎಂಬ ಮಾಹಿತಿ ಪಡೆದು, ಅವರನ್ನು ಸಿ.ಎಂಮಾಡುತ್ತಾರೆ. ಕೇಂದ್ರದ ನಾಯಕರು ಹಾಕಿದ ಗೆರೆಯನ್ನು ದಾಟುವುದಿಲ್ಲ’ ಎಂದು ತಿಳಿಸಿದರು.

ಸಚಿವ ಗೋಪಾಲಯ್ಯ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಬಾಂಬೆ ಬ್ರದರ್ಸ್ ಎಲ್ಲಾಭಾರತೀಯ ಜನತಾ ಪಕ್ಷದ ಸಕ್ರಿಯ ಸದಸ್ಯರು. ಬಿಜೆಪಿ ಸ್ಥಾನ ಮಾನ ನೀಡಿದೆ. ಪಕ್ಷ ನೀಡುವ ಕೆಲಸವನ್ನು ಮಾಡಿಕೊಂಡು ಹೋಗುತ್ತೇವೆ ಎಂದರು.

‘ಬಿಜೆಪಿ ಬಿಡುವ ಪ್ರಶ್ನೇಯೇ ಇಲ್ಲ. ಪಕ್ಷದ ನಿಲುವಿಗೆ ಎಲ್ಲರೂ ಬದ್ಧರಾಗಿರುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT