ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರದರ್ಶಕ ಆಡಳಿತ ನೀಡಲು ಬದ್ಧ: ಎಚ್.ಕೆ.ಸುರೇಶ್

Published 14 ಮೇ 2023, 14:04 IST
Last Updated 14 ಮೇ 2023, 14:04 IST
ಅಕ್ಷರ ಗಾತ್ರ

ಬೇಲೂರು: ‘ಕ್ಷೇತ್ರದಲ್ಲಿ ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ಕೇಳಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗುತ್ತದೆ. ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಭ್ರಷ್ಟಾಚಾರ ರಹಿತವಾಗಿ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗುತ್ತದೆ. ಪಟ್ಟಣದ ಮುಖ್ಯರಸ್ತೆ ಅಗಲೀಕರಣಕ್ಕೆ ಸಂಬಂಧ ಪಟ್ಟಂತೆ ಶೀಘ್ರವೇ ಸಭೆ ಕರೆಯಲಾಗುತ್ತದೆ. ಪ್ರವಾಸಿಗರು ಉಳಿಯಲು ಯಾಂತ್ರಿ ನಿವಾಸ ಮತ್ತು ಉದ್ಯಾನವನ ಅಭಿವೃದ್ಧಿ ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ಈ ಹಿಂದಿನ ಶಾಸಕರ ಕಾಮಗಾರಿಗಳನ್ನು ಕೂಡ ಮುಂದುವರೆಸಲು ನಮ್ಮ ಅಭ್ಯಂತರವಿಲ್ಲ, ಆದರೆ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಲಾಗುತ್ತದೆ. ಆಶ್ರಯ ನಿವೇಶನಗಳನ್ನು ನೀಡಲು ಕ್ರಯಕೈಗೊಳ್ಳುತ್ತೇನೆ’ ಎಂದರು.

‘ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಹತ್ತಾರು ಗಣ್ಯರು ಬೇಲೂರು ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ನಡೆಸಿ ಬಿಜೆಪಿ ಗೆಲುವಿಗೆ ಕಾರಣರಾಗಿದ್ದಾರೆ’ ಎಂದರು.

ಬಿಜೆಪಿ ಮುಖಂಡರಾದ ರೇಣುಕುಮಾರ್, ಜೆ.ಕೆ.ಕುಮಾರ್, ಪರ್ವತಯ್ಯ, ಎಸ್.ರವಿ, ಪರ್ವತಯ್ಯ, ಸಿ.ಎಸ್.ಪ್ರಕಾಶ್, ಡಿಶಾಂತ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT