ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಸೂಚನೆ
Last Updated 9 ಏಪ್ರಿಲ್ 2021, 2:27 IST
ಅಕ್ಷರ ಗಾತ್ರ

ಹಾಸನ: ಬೆಂಗಳೂರು - ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಪ್ರಮುಖ ರಸ್ತೆಗಳಲ್ಲೊಂದಾಗಿದ್ದು, ಹಾಸನ-ಮಾರನಹಳ್ಳಿ ನಡುವಿನ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸಿ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಮಾರನಹಳ್ಳಿ ರಸ್ತೆ ಕಾಮಗಾರಿಗೆ ಅಗತ್ಯವಿರುವ ಜಲ್ಲಿಕಲ್ಲು ಪೂರೈಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಇದೊಂದು ಮಹತ್ವದ ಯೋಜನೆಯಾಗಿದ್ದು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿದೆ, ಮುಂಗಾರು ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇರುವುದರಿಂದ ಆದಷ್ಟು ಬೇಗ ಗರಿಷ್ಠಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆ ಸಂಸ್ಥೆಯ ಪ್ರತಿನಿಧಿಗಳು ಜಲ್ಲಿಕಲ್ಲು ಲಭ್ಯತೆಗೆ ಕೊರತೆಯಿದ್ದು, ಆದಷ್ಟು ಬೇಗ ಹಾಸನ ತಾಲ್ಲೂಕಿನ ಯರೆಬೋರೇಕಾವಲ್ ಗ್ರಾಮದ ಸರ್ವೇ ನಂ. 1 ಮತ್ತು ಗುಳೇನಹಳ್ಳಿ ಗ್ರಾಮದ ಸರ್ವೆ ನಂ. 20 ಬ್ಲಾಸ್ಟಿಂಗ್ ನಡೆಸಲು ಅನುಮತಿ ನೀಡಬೇಕು ಎಂದು ಕೋರಿದರು.

ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ ನಿಯಮಬದ್ದವಾಗಿದ್ದಲ್ಲಿ ನಿರಾಕ್ಷೇಪಣಾ ಪತ್ರ ನೀಡುವಂತೆ ಕೋರಲಾಗಿದ್ದು, ಆದಷ್ಟು ಶೀಘ್ರವಾಗಿ ಒದಗಿಸಿ ಕಾಮಗಾರಿ ತ್ವರಿತವಾಗಿ ನಡೆಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್, ಅಗ್ನಿಶಾಮಕ ಇಲಾಖೆಯ ರಂಗನಾಥ್, ಗಣಿ ಮತ್ತು ಭೂ ವಿಜ್ಞಾನಿ ಅಧಿಕಾರಿ ನಾಗರಾಜ್ ಅವರು ತಾವು ಈಗಾಗಲೇ ಸ್ಥಳ ಪರಿಶೀಲಿಸಿ ವರದಿ ನೀಡಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT