ಹಾಸನ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಹಾಗೂ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿ ಆಯ್ದುಕೊಳ್ಳುವಾಗ ಅದರ ಅನುಕೂಲ ಪಡೆಯುವ ಜನಸಂಖ್ಯೆ ಅಗತ್ಯಗಳು ಅವಶ್ಯಕತೆಗಳ ಬಗ್ಗೆ ಗಮನ ಹರಿಸುವುದು ಮುಖ್ಯ ಎಂದರು.

ನಿಯಮ ವ್ಯಾಪ್ತಿಯೊಳಗೆ ಬರುವ ಕಾಮಗಾರಿ ಹಾಗೂ ಸೇವಾ ಕಾರ್ಯಗಳಿಗೆ ಮಾತ್ರ ಅನುದಾನ ವೆಚ್ಚ ಮಾಡಬೇಕು. ಮಾಡಿದ ವೆಚ್ಚಗಳಿಗೆ ಸೂಕ್ತ ದಖಲಾತಿ ಒದಗಿಸಬೇಕು ಎಂದು ಹೇಳಿದರು.

ಅಂಗನವಾಡಿ ನಿರ್ಮಾಣ ಕಾರ್ಯದಲ್ಲಿ ಸಮ ಸ್ವರೂಪ ಇರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.