ಹಾಸನ: ‘ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಶೋಷಿತ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿಯೇ ಡಿ.5ರಂದು ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಗುಣಾತ್ಮಕ ನಾಯಕತ್ವ ಬಲಪಡಿಸುವ ಸಮಾವೇಶ ಇದು’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ಈ ವಿಷಯವನ್ನು ತಂದಿದ್ದೇವೆ. ಎಲ್ಲರೂ ಒಪ್ಪಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

‘ಹಲವಾರು ವರ್ಷಗಳಿಂದ ಹಿಂದುಳಿದ ವರ್ಗಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿವೆ. ಹಾಗಾಗಿ ಸಮಾವೇಶದಲ್ಲಿ ಕಾಂಗ್ರೆಸ್ನ ಚಿಹ್ನೆ, ಬಾವುಟಗಳೊಂದಿಗೆ ಶೋಷಿತ ಸಮುದಾಯಗಳ ಒಕ್ಕೂಟದ ಚಿಹ್ನೆ, ಬಾವುಟಗಳನ್ನು ಹಾಕುತ್ತೇವೆ’ ಎಂದರು.

‘ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಹಾಸನದಲ್ಲೂ ಪಕ್ಷಕ್ಕೆ ಶಕ್ತಿ ತುಂಬಲೆಂದು ಆಯೋಜಿಸಲಾಗಿದೆ. ಯಾರ ವಿರುದ್ಧವೂ ತೊಡೆ ತಟ್ಟುವ ಕಾರ್ಯಕ್ರಮವಲ್ಲ’ ಎಂದು ಸಚಿವ ವೆಂಕಟೇಶ್ ಹೇಳಿದರು.

‘ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದು, ಪಿತೂರಿ ಮಾಡಿದರೆ ಸುಮ್ಮನಿರುವುದಿಲ್ಲವೆಂಬ ಸಂದೇಶ ನೀಡಲು ಹಮ್ಮಿಕೊಳ್ಳಲಾಗಿದೆ’ ಎಂದು ಸಚಿವ ವೆಂಕಟೇಶ್ ಹಾಗೂ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.

‘ಸಂವಿಧಾನ ಮತ್ತು ಜಾತ್ಯತೀತತೆಯ ಪರವಾಗಿ ಹಾಗೂ ದ್ವೇಷ ರಾಜಕಾರಣದ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ ಎಂಬ ಸಂದೇಶ ನೀಡುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.