ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವೆ; ಶ್ರೇಯಸ್ ಪಟೇಲ್

Published 18 ಏಪ್ರಿಲ್ 2024, 12:33 IST
Last Updated 18 ಏಪ್ರಿಲ್ 2024, 12:33 IST
ಅಕ್ಷರ ಗಾತ್ರ

ಅರಕಲಗೂಡು: ನನಗೆ ಒಮ್ಮೆ ಅವಕಾಶ ನೀಡಿ, ನಿಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು  ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮನವಿ ಮಾಡಿದರು.

ತಾಲೂಕಿನ ಮಲ್ಲಿಪಟ್ಟಣದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮತ ಯಾಚನೆ ಮಾಡಿದರು. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡ ಜನರಿಗೆ ಸವತ್ತುಗಳನ್ನು ಕೊಡುತ್ತಿದೆ. ಮತದಾರರು  ಪಕ್ಷದ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಎಂ.ಟಿ. ಕೃಷ್ಣೇಗೌಡ ಮಾತನಾಡಿ, ಜೆಡಿಎಸ್ ಕುಟುಂಬದ ಅಧಿಕಾರ ಕೊನೆಗಾಣಿಸಬೇಕಾದರೆ ಚುನಾವಣೆಯಲ್ಲಿ ಮತದಾರರುತಕ್ಕಪಾಠ ಕಲಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಎಚ್.ಪಿ.‌ ಶ್ರೀಧರ್ ಗೌಡ ಮಾತನಾಡಿ, ನಮ್ಮದು ದೌರ್ಜನ್ಯ ಮಾಡುವ ಪಕ್ಷವಲ್ಲ. ಎಲ್ಲರಿಗೂ ಸಮಬಾಳು ನೀಡಿರುವ ಪಕ್ಷವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್, ಮಾಜಿ ಅಧ್ಯಕ್ಷ ಜಾವಗಲ್ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಎಐಸಿಸಿ ಸಂವಹನ ಸಂಯೋಜಕ ಡಾ. ದಿನೇಶ್ ಭೈರೇಗೌಡ  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT