ಭಾನುವಾರ, ಜುಲೈ 25, 2021
21 °C

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೈಕಲ್ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಂಸದ ಡಿ.ಕೆ.ಸುರೇಶ್‌ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಸೈಕಲ್ ಜಾಥಾ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 11.30 ಗಂಟೆಗೆ ಆರಂಭವಾದ ಜಾಥಾ ಎನ್ .ಆರ್. ವೃತದ ಮೂಲಕ ಕಸ್ತೂರಿ ಬಾ ರಸ್ತೆಯಲ್ಲಿ ಸಂಚರಿಸಿ ಪ್ರವಾಸಿ ಮಂದಿರದಲ್ಲಿ ಮುಕ್ತಾಯವಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.

ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ₹60, ಗ್ಯಾಸ್ ₹440 ಇತ್ತು. ಆದರೆ ಇದೀಗ ಪೆಟ್ರೋಲ್ ₹103 ದಾಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದು, ಗೊಬ್ಬರ ಹಾಗೂ ಕೃಷಿ ಪರಿಕರಗಳ ದರದಲ್ಲಿ ಏರಿಕೆ ಕಂಡಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್‌ ಮಂಜುನಾಥ್‌, ಮುಖಂಡರಾದ ಬನವಾಸೆ ರಂಗಸ್ವಾಮಿ, ಬಿ.ಪಿ.ಮಂಜೇಗೌಡ, ಎಚ್‌.ಕೆ.ಮಹೇಶ್‌, ಬಿ.ಶಿವರಾಂ, ಮಾಜಿ ಮೇಯರ್ ಹುಚ್ಚಪ್ಪ ಹಾಗೂ ಮಂಜುನಾಥ್ ಭಂಡಾರಿ ಸೇರಿದಂತೆ ನೂರಾರು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು