ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಖಾನೆ ಆರಂಭಿಸಲು ಕಾಂಗ್ರೆಸ್‌ ಆಗ್ರಹ

Last Updated 25 ಸೆಪ್ಟೆಂಬರ್ 2020, 2:45 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ಸೆ.30ಕ್ಕೆ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಯಲ್ಲಿ ಕಬ್ಬು ಅರೆಯಲು ಆರಂಭಿ ಸದಿದ್ದರೆ ಕಾಂಗ್ರೆಸ್ ಪಕ್ಷದಿಂದ ವಿಧಾನಸೌಧ ಚಲೋ ಚಳವಳಿ ಹಮ್ಮಿ ಕೊಳ್ಳಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಎಂ.ರಾಮಚಂದ್ರ ಹೇಳಿದರು.

ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ನಿರ್ದೇಶಕರೂ ಆಗಿರುವ ಶಾಸಕ ಸಿ.ಎನ್.ಬಾಲಕೃಷ್ಣ ರೈತರ ಪರ ನಿಲ್ಲಬೇಕಿತ್ತು. ರೈತರನ್ನು ಸಂಘಟಿಸಿ ಹೋರಾಟ ಮಾಡಬೇಕಿತ್ತು. ಆದರೆ, ಶಾಸಕರು ಆ ರೀತಿ ನಡೆದುಕೊಳ್ಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆ ಆರಂಭಿಸುವ ಕುರಿತು ಕಾರ್ಖಾನೆ ಅಧಿಕಾರಿಗಳು ಹೇಳಿಕೆ ನೀಡ ಬೇಕಿತ್ತು. ಆದರೆ, ಅವರ ಪರವಾಗಿ ಶಾಸ ಕರು ಹೇಳಿಕೆ ನೀಡುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳು ನೀಡಿದ ಭರವಸೆಯಂತೆ ಸೆ.30ಕ್ಕೆ ಕಬ್ಬು ಅರೆಯುವಿಕೆ ಆರಂಭಿಸಿ ಬೆಳೆಗಾರರ ಹಿತ ಕಾಪಾಡಬೇಕು ಎಂದರು.

ಶಾಸಕ ಬಾಲಕೃಷ್ಣ ಅವರು ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಬ್ಯಾಂಕ್ ನಿರ್ದೇಶಕ ಸ್ಥಾನವನ್ನು ಜೆಡಿಎಸ್ ಕಾರ್ಯಕರ್ತರಿಗೆ ನೀಡಬಹುದಾಗಿತ್ತು. ಮತ್ತೆ ಏಕೆ ನಿರ್ದೇಶಕರಾಗಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಮಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ 5 ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ಏರ್ಪಡಿಸಲಾಗುತ್ತದೆ. ಸೆ.4 ರಿಂದ ಶುರುವಾಗಿರುವ ಸದಸ್ಯತ್ವ ಅಭಿಯಾನ ಅ.9 ವರೆಗೆ ಮುಂದುವರಿಯಲಿದೆ. ತಾಲ್ಲೂಕಿನಲ್ಲಿ 25 ಸಾವಿರ ಜನರನ್ನು ಪಕ್ಷದ ಸಕ್ರಿಯ ಸದಸ್ಯರನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ 5 ಸಾವಿರ ಜನರನ್ನು ಸದಸ್ಯರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.

ತಾ.ಪಂ.ಅಧ್ಯಕ್ಷೆ ಎಚ್.ಎಸ್.ಶ್ಯಾಮಲಾ, ಉಪಾಧ್ಯಕ್ಷ ಕೆ.ಬಿ.ರಾಮ ಕೃಷ್ಣೇಗೌಡ, ಮುಖಂಡ ರಾಮಣ್ಣ ಇದ್ದರು.

ಸದಸ್ಯತ್ವ ಅಭಿಯಾನ: ಮಳ್ಳೇನಹಳ್ಳಿ ಯಲ್ಲಿ ಕಾಂಗ್ರೆಸ್ ಪಕ್ಷದವ ತಿಯಿಂದ ಸದಸ್ಯತ್ವ ಅಭಿಯಾನ ನಡೆ ಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಎಂ.ರಾಮಚಂದ್ರ, ಎಂ.ಕೆ.ಮಂಜೇ ಗೌಡ, ಮುಖಂಡ ಸಿ.ಎಸ್.ಜಯರಾಂ, ತಾ.ಪಂ.ಅಧ್ಯಕ್ಷ ಎಚ್.ಎಸ್.ಶ್ಯಾಮಲಾ, ಸದಸ್ಯ ಎಂ.ಎಸ್.ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT