ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್.ಎಂ.ಆನಂದ್ ನಿಧನ

Last Updated 1 ಆಗಸ್ಟ್ 2021, 5:09 IST
ಅಕ್ಷರ ಗಾತ್ರ

ಹಾಸನ: ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್.ಎಂ. ಆನಂದ್ (72) ಭಾನುವಾರ ನಿಧನರಾದರು.

ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಟರ್‌ ಆರ್‌ವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಅವರು ಮೂರು ದಶಕಗಳ ಹಿಂದೆ ಕಾಂಗ್ರೆಸ್ ಸೇರಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2004-2010 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. 1996ರಲ್ಲಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಹಾಸನ ನಗರಾಭಿವೃದ್ಧಿ ಪ್ರಾಧಿಕಾರ, ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷಾಗಿಯೂ ಸೇವೆ ಸಲ್ಲಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.
‌ಪಾರ್ಥೀವ ಶರೀರವನ್ನು ನಗರದ ಗುರು ಚಿತ್ರ ಮಂದಿರದ ಹಿಂಭಾಗದ ಅವರ ಸ್ವಗೃಹ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಸಂಜೆ ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT