ಹಾಸನ: ‘ಅಧಿಕಾರದ ಆಸೆಯಿಂದ ಕಾಂಗ್ರೆಸ್ ಪಕ್ಷ ಸೇರುವುದಾದರೆ ಅವಕಾಶ ಇಲ್ಲ’ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಬಿಜೆಪಿ ಹಿರಿಯ ಮುಖಂಡ ಎ.ಮಂಜು ಮರಳಿ ಕಾಂಗ್ರೆಸ್ ಸೇರ್ಪಡೆ ಕುರಿತ ಪ್ರಶ್ನೆಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಸೇರುವುದಾದರೆ ಮೊದಲು ಅರ್ಜಿ ಹಾಕಬೇಕು. ಅವರನ್ನು ಪಕ್ಷಕ್ಕೆ ಸೇರಿಸಿ ಕೊಳ್ಳಬೇಕೇ ಎಂಬುದರ ಬಗ್ಗೆ ಸಮಿತಿ ನಿರ್ಧರಿಸಿದ ಬಳಿಕ ಅವಕಾಶ ನೀಡಲಾಗುವುದು’ ಎಂದರು.
ಇದಕ್ಕೂ ಮುನ್ನ ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರನ್ನು ಭೇಟಿ ಮಾಡಿ, ‘ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಎ.ಮಂಜು ಅವರನ್ನ ಮತ್ತೆ ಕಾಂಗ್ರೆಸ್ ಸೇರಿಸಿಕೊಂಡು, ಮುಂದಿನ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಟಿಕೆಟ್ ನೀಡುವಂತೆ’ ಒತ್ತಾಯಿಸಿದರು.
‘ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕರ ಗಮನಕ್ಕೆ ತರಲಾಗುವುದು. ಕಾಂಗ್ರೆಸ್ ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕೋಮುವಾದಿ ಪಕ್ಷಕ್ಕೆ ಅವರು ಹೋಗಿದ್ದು ತಪ್ಪು. ಜಿಲ್ಲಾ ಮುಖಂಡರು ಹಾಗೂ ಮಂಜು ಜತೆಯೂ ಚರ್ಚಿಸಲಾಗುವುದು’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.