ಹಾಸನ: ‘ನಾರಿ ಶಕ್ತಿ ವಂದನ್ ಅಧಿನಿಯಮ– 2026 ಸೋಲಿಸಿದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟವು ಇತಿಹಾಸದ ಪುಟಗಳಲ್ಲಿ ಮಹಿಳಾ ಏಳಿಗೆ ವಿರೋಧಿ ಎಂಬ ಖ್ಯಾತಿ ಪಡೆಯಲಿದೆ’ ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ಷೇತ್ರ ವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಹೆಚ್ಚಿನ ಲಾಭವಾಗುತ್ತಿತ್ತು. ಸ್ವಾತಂತ್ರ್ಯ ಸಿಕ್ಕಾಗ ದೇಶದ ಜನಸಂಖ್ಯೆ 35-40 ಕೋಟಿ ಇದ್ದು, 2026 ರಲ್ಲಿ ಸುಮಾರು ಮೂರು ಪಟ್ಟು ಅಂದರೆ 146-147 ಕೋಟಿಯಷ್ಟು ಹೆಚ್ಚಾಗಿದೆ. ಆದರೆ ಲೋಕಸಭಾ ಸದಸ್ಯರ ಸಂಖ್ಯೆ 543 ಮುಂದುವರಿದಿದೆ. ಇದರಿಂದ ಜನಸಂಖ್ಯೆಯ ಅನುಪಾತಕ್ಕೆ ತಕ್ಕಂತೆ ಸಂಸದರ ಸಂಖ್ಯೆ ಹೆಚ್ಚಾಗದೇ ಇರುವುದರಿಂದ ಆಡಳಿತ ಕಷ್ಟವಾಗುತ್ತಿದೆ’ ಎಂದರು.

‘ಕ್ಷೇತ್ರ ಮರು ವಿಂಗಡಣೆ ಹಾಗೂ ಶೇ 33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಬಂದಿದ್ದರೆ, ಕೇವಲ ಬಿಜೆಪಿಯ ಮಹಿಳೆಯರಿಗೆ ಮಾತ್ರ ಪ್ರಾತಿನಿಧ್ಯ ಸಿಗದೇ ಕಾಂಗ್ರೆಸ್ ಹಾಗೂ ಅದರ ಇಂಡಿಯಾ ಕೂಟಕ್ಕೂ ಸಿಗುತ್ತಿತ್ತು. ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ಮಹಿಳಾ ಮೀಸಲಾತಿ ತರಲಿಲ್ಲ. ಇಂದಿರಾಗಾಂಧಿ ಕಾಲದಿಂದಲೂ ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ವಿರೋಧ ಮಾಡುತ್ತಲೇ ಬಂದಿದೆ’ ಎಂದು ದೂರಿದರು.

ಕೇಂದ್ರ ಸರ್ಕಾರ ಜಾರಿಗೆ ತರುವ ಎಲ್ಲ ಯೋಜನೆಗಳನ್ನೂ ವಿರೋಧಿಸುವ ಭರದಲ್ಲಿ ಅಭಿವೃದ್ಧಿಯನ್ನೇ ವಿರೋಧಿಸುತ್ತಿರುವ ಕಾಂಗ್ರೆಸ್ ವಿಚಾರಧಾರೆ ದೇಶಕ್ಕೆ ಮಾರಕ. ಮುಂದಿನ ಚುನಾವಣೆಗಳಲ್ಲಿ ಮತದಾರರು ಕಾಂಗ್ರೆಸ್ ಮುಕ್ತ ಭಾರತ ಮಾಡಲಿದ್ದಾರೆ ಎಂದರು.

ನಗರ ಮಂಡಲ ಅಧ್ಯಕ್ಷ ಯೋಗೀಶ್ ಮಂಜಣ್ಣ, ವಕ್ತಾರ ಆರ್.ಮೋಹನ್, ಬಿ.ವೇದಾವತಿ, ದಯಾನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-36-1221488018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.